ಶಿರಸಿ: ‘ಮಕ್ಕಳಿಗೆ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣದ ಪ್ರಭಾವ ಹೆಚ್ಚಾಗಿರುತ್ತಿದೆ. ಹೀಗಾಗಿ ಮನೆಯಲ್ಲಿ ಮಕ್ಕಳಿಗೆ ಧಾರ್ಮಿಕ ಹಾಗೂ ಸಂಸ್ಕೃತಿಯ ಶಿಕ್ಷಣ ದೊರೆಯುವಂತೆ ಮಾಡುವುದು ಪೋಷಕರ ಜವಾಬ್ದಾರಿಯಾಗಿದೆ’ ಎಂದು ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ನಗರದ ವಿಕಾಸಾಶ್ರಮ ಮೈದಾನದಲ್ಲಿ ಯುಗಾದಿ ಉತ್ಸವ ಸಮಿತಿ ಗುರುವಾರ ಆಯೋಜಿಸಿದ್ದ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

‘ಹಿಂದೂ ಹಬ್ಬಗಳಲ್ಲಿ ಸಾಮಾಜಿಕ, ಕೌಟುಂಬಿಕ ಹಾಗೂ ವೈಯಕ್ತಿಕ ಹಿತಚಿಂತನೆಯಿದೆ. ಯುಗಾದಿ ಹೊಸ ವರ್ಷದ ಆರಂಭ ಮತ್ತು ಹಿಂದುತ್ವದ ಬುನಾದಿ. ಅದನ್ನು ಸರಿಯಾಗಿ ಆಚರಿಸಿದರೆ ನಮಗೆ ಶಕ್ತಿ ಸಿಗುತ್ತದೆ. ಇಡೀ ವರ್ಷ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಮಾಡಬೇಕು’ ಎಂದು ತಿಳಿಸಿದರು.

ಬಣ್ಣದ ಮಠದ ಶಿವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ಪಾಶ್ಚಾತ್ಯ ಶಿಕ್ಷಣದ ಪ್ರಭಾವದಿಂದ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಸಂಸ್ಕೃತಿ, ನೈತಿಕತೆ ನಾಶವಾಗಿದೆ. ನಮ್ಮ ಪಂಚಾಂಗದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಶಿಕ್ಷಣ ಪದ್ಧತಿಯನ್ನು ಸರಿದಾರಿಗೆ ತರಬೇಕು’ ಎಂದರು.

ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಮಾತನಾಡಿ, ‘ಭಗವಂತನನ್ನು ನಂಬಿ ಕೆಟ್ಟವರಿಲ್ಲ, ಭಕ್ತಿ ಹೆಚ್ಚಾಗಬೇಕು' ಎಂದರು. ದಿಕ್ಸೂಚಿ ಭಾಷಣ ಮಾಡಿದ ಗಜಾನನ ಪೈ,'ಸಮಾಜ ವಿರೋಧಿ ಸಂಗತಿಗಳನ್ನು ಪರಾಭವಗೊಳಿಸಬೇಕು. ಧರ್ಮ, ಸಂಸ್ಕೃತಿ ಕೇವಲ ಪುಸ್ತಕಕ್ಕೆ ಸೀಮಿತವಾಗದೇ ಆಚರಣೆಗೆ ಬರಬೇಕು’ ಎಂದರು.

ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ ದುಭಾಶಿ, ಸಂಚಾಲಕ ಕೃಷ್ಣ ಎಸಳೆ, ಮುಖಂಡ ಅಶ್ವಿನ ಭೀಮಣ್ಣ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-20-6148422

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.