ಶಿರಸಿ: ನಗರದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮಾರಿಕಾಂಬಾ ದೇವಾಲಯದ ಎದುರಿನ ರಸ್ತೆಗೆ ಮಂಜೂರಾಗಿದ್ದ ಭೂಗತ ವಿದ್ಯುತ್ ಕೇಬಲ್ ಮಾರ್ಗ ಕಾಮಗಾರಿ ನಿಗದಿತ ಸಮಯದೊಳಗೆ ಆರಂಭವಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

‘ಇಲ್ಲಿನ ಮಾರಿಕಾಂಬಾ ಜಾತ್ರೆಯ ರಥೋತ್ಸವವು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗುತ್ತದೆ. ರಥ ಸಾಗುವ ಮಾರ್ಗದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಭಕ್ತಾದಿಗಳಿಗೆ ಮತ್ತು ರಥಕ್ಕೆ ಅಡ್ಡಿಯಾಗುವ ಜತೆಗೆ, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿರಲಿಲ್ಲ.

ನಗರದ ರಸ್ತೆಗಳು ಕಿರಿದಾಗಿದ್ದು, ಮೇಲ್ಭಾಗದ ವಿದ್ಯುತ್ ತಂತಿಗಳಿಂದ ನಿರಂತರ ಸಮಸ್ಯೆಗಳಾಗುತ್ತಿದ್ದವು. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ಭಕ್ತರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ರಥ ಸಾಗುವ ಮಾರ್ಗದಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸಲು ಯೋಜನೆ ರೂಪಿಸಲಾಗಿತ್ತು. ಶಾಸಕ ಭೀಮಣ್ಣ ನಾಯ್ಕ ಅವರ ವಿಶೇಷ ಮುತುವರ್ಜಿಯಿಂದ ₹3 ಕೋಟಿ ಅನುದಾನವೂ ಬಿಡುಗಡೆಯಾಗಿದೆ. ಆದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿಳಂಬ ನೀತಿಯಿಂದ ಕಾಮಗಾರಿಗೆ ಇನ್ನೂ ಚಾಲನೆ ಸಿಕ್ಕಿಲ್ಲ ಎಂಬ ದೂರು ಕೇಳಿ ಬರುತ್ತಿದೆ.

ಫೆಬ್ರುವರಿ ತಿಂಗಳಲ್ಲಿ ನಡೆದ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ರಸ್ತೆ ಅಗೆಯುವ ಕೆಲಸ ಕೈಗೆತ್ತಿಕೊಂಡರೆ ಭಕ್ತಾದಿಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತದೆ ಎಂಬ ಕಾರಣಕ್ಕಾಗಿ ಕಾಮಗಾರಿಯನ್ನು ಜಾತ್ರೆಯ ನಂತರಕ್ಕೆ ಮುಂದೂಡಲಾಗಿತ್ತು. ಆದರೆ, ಜಾತ್ರೆ ಮುಗಿದು ಒಂದೂವರೆ ತಿಂಗಳು ಕಳೆದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಶಾಸಕರು ಉತ್ಸಾಹದಿಂದ ಅನುದಾನ ಬಿಡುಗಡೆಗೊಳಿಸಿದ್ದರೂ, ಅದನ್ನು ಜಾರಿಗೆ ತರುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ವಿಫಲರಾಗಿದ್ದಾರೆ.

‘ದಿನ ಕಳೆದಂತೆ ಮಳೆಗಾಲ ಸಮೀಪಿಸುತ್ತದೆ. ಮಳೆಗಾಲದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಅಗೆಯುವುದು ಅಸಾಧ್ಯವಾಗಲಿದ್ದು, ಈ ಯೋಜನೆಯು ಮಳೆಗಾಲದ ನಂತರಕ್ಕೆ ಮತ್ತೆ ಮುಂದೂಡಲ್ಪಡುವ ಸಾಧ್ಯತೆ ದಟ್ಟವಾಗಿದೆ. ಸಕಾಲದಲ್ಲಿ ಕಾಮಗಾರಿ ನಡೆಸಿದ್ದರೆ ಮಳೆಗಾಲಕ್ಕೂ ಮೊದಲೇ ನಗರದ ಜನರಿಗೆ ಈ ಭೂಗತ ವಿದ್ಯುತ್ ಸಂಪರ್ಕದ ಲಾಭ ಸಿಗುತ್ತಿತ್ತು’ ಎನ್ನುತ್ತಾರೆ ಸ್ಥಳೀಯರಾದ ರಾಜೇಶ ಭಟ್.

‘ಕಾಮಗಾರಿಯ ಟೆಂಡರ್ ಮುಂಡಗೋಡ ಮೂಲದ ಗುತ್ತಿಗೆದಾರರಿಗೆ ಲಭಿಸಿದೆ. ಕಾರಣ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಮಳೆಗಾಲಕ್ಕೂ ಮುನ್ನ ಸಾಧ್ಯವಿರುವಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಿ, ನಗರದ ಜನತೆಗೆ ಆಗುತ್ತಿರುವ ಅನನುಕೂಲವನ್ನು ತಪ್ಪಿಸಬೇಕು’ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಈಗಾಗಲೇ ಕಾಮಗಾರಿ ಗುತ್ತಿಗೆ ನೀಡಲಾಗಿದ್ದು, ಶೀಘ್ರವೇ ಕೆಲಸ ಆರಂಭಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.
ನಾಗರಾಜ ಪಾಟೀಲ, ಹೆಸ್ಕಾಂ ಎಇಇ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.