ಕಾರವಾರ: ಕಾಮಗಾರಿ ಪ್ರಗತಿಯಲ್ಲಿರುವ ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರಕ್ಕೆ ಡಿ.30ರಿಂದ ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

‘ಶಿರಸಿಯಲ್ಲಿ ನಡೆಯುವ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ವರದಿ ಆಧರಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

‘ಸಂಚಾರ ಸಂದರ್ಭದಲ್ಲಿ ಬಸ್ ಹೊರತುಪಡಿಸಿ ಬೇರೆ ಭಾರಿ ವಾಹನಗಳು ಸಂಚರಿಸಲು ಅವಕಾಶವಿಲ್ಲ. ಕಾಮಗಾರಿ ಪ್ರಗತಿಯಲ್ಲಿರುವ ಪ್ರದೇಶದಲ್ಲಿ ವೇಗದ ಮೀತಿ 20 ಕಿ.ಮೀ.ಗೆ ಸೀಮಿತವಾಗಿರಬೇಕು’ ಎಂದೂ ಸೂಚಿಸಿದ್ದಾರೆ.

‘ಪೊಲೀಸ್ ಇಲಾಖೆ ವತಿಯಿಂದ ಅವಶ್ಯವಿರುವ ಕಡೆಗಳಲ್ಲಿ ಬ್ಯಾರಿಕೇಡ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಂಚಾರ ದಟ್ಟಣೆ ಆಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ವೇಗದ ಮಿತಿ ಫಲಕ, ರಸ್ತೆ ತಿರುವು ಪ್ರದೇಶದಲ್ಲಿ ಅಗತ್ಯ ಸೂಚನಾ ಫಲಕಗಳು, ಇನ್ನೀತರ ಅಗತ್ಯ ಸರಕ್ಷಾ ಕ್ರಮಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ 2024ರ ಡಿ.2ರಿಂದ ಬಸ್ ಸೇರಿದಂತೆ ಭಾರಿ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿಷೇಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.