‘ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಲ್ಲಿ ವಿಫಲರಾಗಿದ್ದಲ್ಲದೆ, ಕರ್ತವ್ಯದಲ್ಲಿ ಅಶಿಸ್ತು ಮತ್ತು ದುರ್ನಡತೆ ಪ್ರದರ್ಶಿಸಿದ ಕಾರಣಕ್ಕೆ ಎಸ್ಐ ಅವರನ್ನು ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ. ಅಧೀನ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡದ ಗ್ರಾಮೀಣ ಪೊಲೀಸ್ ಠಾಣೆಯ ವೃತ್ತ ನೀರಿಕ್ಷಕರ ವಿರುದ್ಧವೂ ಶಿಸ್ತು ಕಮ್ರಕ್ಕೆ ಸೂಚಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.