ಸಿದ್ದಾಪುರ: ಅಡಿಕೆಗೆ ತಗುಲಿರುವ ಎಲೆಚುಕ್ಕಿ ಮತ್ತು ಹಳದಿ ರೋಗದಿಂದಾಗಿ ರೈತರು ನಿರೀಕ್ಷಿತ ಬೆಳೆ ಹಾಗೂ ಆದಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಹಕಾರಿ ಸಂಸ್ಥೆಗಳು ಬೆಳೆಗಾರರಿಗೆ ಅಗತ್ಯ ಸಾಲ ಸೌಲಭ್ಯ ನೀಡಲು ಮುಂದಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಎಂ.ಎಂ. ಜೋಶಿ ಗಣೇಶ ನೇತ್ರಾಲಯ ಹಾಗೂ ಟಿ.ಎಂ.ಎಸ್. ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಕಣ್ಣಿನ ಉಚಿತ ತಪಾಸಣಾ ಶಿಬಿರ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೇತ್ರದಾನವು ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ನಮ್ಮ ಜೀವಿತಾವಧಿಯ ನಂತರ ಮತ್ತೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನದ ಮಹತ್ಕಾರ್ಯವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು. ನಟ ಸಾರ್ವಭೌಮ ರಾಜ್ಕುಮಾರ್ ಅವರು ತಮ್ಮ ನೇತ್ರದಾನದ ಮೂಲಕ ಸಮಾಜಕ್ಕೆ ದೊಡ್ಡ ಮಾದರಿಯಾಗಿದ್ದಾರೆ ಎಂದರು.

ಶಿಬಿರದಲ್ಲಿ ನೂರಾರು ಸಾರ್ವಜನಿಕರು ಪಾಲ್ಗೊಂಡು ಕಣ್ಣಿನ ತಪಾಸಣೆ ಮಾಡಿಸಿಕೊಂಡು ಸೌಲಭ್ಯ ಪಡೆದುಕೊಂಡರು.

ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ವಕೀಲ ರವಿ ಹೆಗಡೆ ಹೂವಿನಮನೆ, ಎಂ.ಎಂ. ಜೋಶಿ ಆಸ್ಪತ್ರೆಯ ನೇತ್ರ ತಜ್ಞರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-20-262592296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.