ಸಿದ್ದಾಪುರ: ‘ಸಾಮಾನ್ಯ ಜನರು ತಮ್ಮು ಕೆಲಸಕ್ಕಾಗಿ ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಜಾರಿಗೊಳಿಸಿದೆ. ಜನರ ಸಮಸ್ಯೆಯನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಪ್ರಯತ್ನಿಸುತ್ತೇವೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಶಂಕರ ಮಠದಲ್ಲಿ ಸೋಮವಾರ ನಡೆದ ಕೊಂಡ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಯೋಜನೆಯ ಉದ್ದೇಶವಾಗಿದೆ. ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗೆ ₹16 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು.

ಈ ವೇಳೆ ಸಾರ್ವಜನಿಕರಿಂದ ಒಟ್ಟು 93 ಅರ್ಜಿಗಳು ಸ್ವೀಕೃತವಾದವು. ಅರ್ಜಿಗಳನ್ನು ಪರಿಶೀಲಿಸಿದ ಶಾಸಕರು, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಉಳಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಶಿರಸ್ತೇದಾರ ಜಿ.ಎಲ್. ಶ್ಯಾಮಸುಂದರ ಸ್ವಾಗತಿಸಿ, ನಿರೂಪಿಸಿದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-20-632088701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.