ಸಿದ್ದಾಪುರ: ಎಲೆಚುಕ್ಕೆ ರೋಗದಿಂದ ಕಂಗೆಟ್ಟಿರುವ ಅಡಿಕೆ ಬೆಳೆಗಾರರಿಗೆ ಕೃಷಿಯೇತರ ಉತ್ಪನ್ನಗಳ ಖರೀದಿಯ ಮೂಲಕ ಹೊಸ ಭರವಸೆ ನೀಡಿದ ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಕಾರ್ಯ ಸ್ತುತ್ಯಾರ್ಹ ಎಂದು ಸ್ಥಳೀಯ ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಹೇಳಿದರು.

ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಂಸ್ಥೆ ಪಟ್ಟಣದ ಪ್ಯಾಡಿ ಸೊಸೈಟಿಯಲ್ಲಿ ನೂತನವಾಗಿ ಆರಂಭಿಸಿದ ಕೃಷಿ ಉತ್ಪನ್ನ ಖರೀದಿ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಸಹಕಾರಿ ಸಂಘವೊಂದು ಇಂತಹ ವಿಭಿನ್ನ ಹಾಗೂ ಸವಾಲಿನ ಕೆಲಸಕ್ಕೆ ಕೈಹಾಕಿ ಯಶಸ್ವಿಯಾಗಿರುವುದು ಹೆಮ್ಮೆಯ ವಿಷಯ. ರೈತರು ಇನ್ಮುಂದೆಯಾದರೂ ಕೃಷಿಯೇತರ ಬೆಳೆಗಳತ್ತ ಹೆಚ್ಚಿನ ಗಮನ ಹರಿಸಿದರೆ ಜೀವನ ಮಟ್ಟ ಸಮತೋಲನದಲ್ಲಿರಲು ಸಾಧ್ಯವಾಗುತ್ತದೆ ಎಂದರು.

ಶಶಿಭೂಷಣ ಹೆಗಡೆ ದೊಡ್ಮನೆ ಮಾತನಾಡಿ, ಕಳೆದ ಎಂಟು ದಶಕಗಳಿಂದ ಅಡಿಕೆಗೆ ಇರುವಂತಹ ಸುಭದ್ರ ಮಾರುಕಟ್ಟೆ ವ್ಯವಸ್ಥೆ ಇತರ ಕೃಷಿಯೇತರ ಉತ್ಪನ್ನಗಳಿಗೆ ಇಲ್ಲದಿರುವುದು ರೈತರ ಹಿನ್ನಡೆಗೆ ಕಾರಣವಾಗಿದೆ. ಈ ಮಾರುಕಟ್ಟೆ ಕೊರತೆಯನ್ನು ನೀಗಿಸಲು ಕದಂಬ ಸಂಸ್ಥೆಯು ಕಳೆದ ಎರಡು ದಶಕಗಳಿಂದ ಶ್ರಮಿಸುತ್ತಿದ್ದು, ಇಂದು ಈ ಉತ್ಪನ್ನಗಳಿಗೆ ಮೌಲ್ಯ ತಂದುಕೊಡುವಲ್ಲಿ ಯಶಸ್ವಿಯಾಗಿದೆ ಎಂದರು.

ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನೀಡಗೋಡ ಮಾತನಾಡಿದರು. ತಹಶೀಲ್ದಾರ್ ಎಂ.ಆರ್. ಕುಲಕರ್ಣಿ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ಎಸ್. ಹೆಗಡೆ, ಪ್ಯಾಡಿ ಸಂಸ್ಥೆಯ ಅಧ್ಯಕ್ಷ ರಮಾನಂದ ಹೆಗಡೆ, ಉಪಾಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಇದ್ದರು.

ಕದಂಬ ನಿರ್ದೇಶಕ ನರೇಂದ್ರ ಹೊಂಡಗಾಶಿ ನಿರ್ವಹಿಸಿದರು. ನಾಗೇಂದ್ರ ಜೋಶಿ ಸ್ವಾಗತಿಸಿದರು. ವಿಶ್ವೇಶ್ವರ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-513472996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.