ಸಿದ್ದಾಪುರ: ‘ಮನುಷ್ಯ ನಿರ್ಮಿತವಾದ ಯಾವುದೂ ಶಾಶ್ವತವಲ್ಲದಿದ್ದರೂ, ಅವನು ಸೃಷ್ಟಿಸಿದ ಅಕ್ಷರ ಮತ್ತು ಸಾಹಿತ್ಯ ಮಾತ್ರ ಮನುಕುಲ ಇರುವವರೆಗೂ ಶಾಶ್ವತವಾಗಿರುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಹೇಳಿದರು.

ಪಟ್ಟಣದ ಬಾಲಭವನದಲ್ಲಿ ಪೂರ್ಣಿಮಾ ಸಾಹಿತ್ಯ ವೇದಿಕೆ ಹಾಗೂ ಪ್ರಯೋಗ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತಿ ಗಂಗಾಧರ ಕೊಳಗಿ ಅವರ ಮರುಮುದ್ರಣಗೊಂಡ ಕೃತಿಗಳ ಅವಲೋಕನ ಕಾರ್ಯಕ್ರಮದಲ್ಲಿ ‘ಕಾಡಂಚಿನ ಯಾನ: ಪರಿಸರದ ಅನುಭವ ಕಥನ’ ಕೃತಿಯ ಕುರಿತು ಅವರು ಮಾತನಾಡಿದರು.

‘ಪುಸ್ತಕ ಎಂಬುದು ಕೇವಲ ಅಚ್ಚಾದ ವಸ್ತುವಲ್ಲ. ಅದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ’ ಎಂದರು.

ಉಪನ್ಯಾಸಕ ರತ್ನಾಕರ ನಾಯ್ಕ ‘ಮನಸು ಆಕಾಶದ ನೀಹಾರಿಕೆ’ ಕೃತಿಯ ಕುರಿತು ಮಾತನಾಡಿ, ‘ಗಂಗಾಧರ ಕೊಳಗಿ ಅವರ ಸಾಹಿತ್ಯವು ಕೇವಲ ಸ್ಥಳೀಯತೆಗೆ ಸೀಮಿತವಾಗದೆ, ಮನುಷ್ಯನ ಮನಸ್ಸಿನ ಒಳತಲ್ಲಣಗಳನ್ನು ವೈಚಾರಿಕ ನೆಲೆಯಲ್ಲಿ ವಿಶ್ಲೇಷಿಸುವ ಶಕ್ತಿ ಹೊಂದಿದೆ. ಉತ್ತರ ಕನ್ನಡ ಜಿಲ್ಲೆಯ ಗದ್ಯ ಸಾಹಿತ್ಯದ ಪರಂಪರೆಯಲ್ಲಿ ಗಂಗಾಧರ ಕೊಳಗಿ ಅವರು ತಮ್ಮ ವಿಶಿಷ್ಟ ಶೈಲಿಯ ಮೂಲಕ ಮಹತ್ವದ ಸ್ಥಾನ ಪಡೆದಿದ್ದಾರೆ. ಶೀರ್ಷಿಕೆಯ ಕಥೆಯು ಸಾವು ಮತ್ತು ಸಂಬಂಧಗಳ ಹೊಸ ಪ್ರಶ್ನೆಗಳನ್ನು ಓದುಗರ ಮುಂದೆ ತೆರೆದಿಡುತ್ತದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಕುಂಬ್ರಿಗದ್ದೆ, ಲಯನ್ಸ್ ಅಧ್ಯಕ್ಷ ರಾಘವೇಂದ್ರ ಭಟ್ಟ, ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್ ಹಾಗೂ ಪ್ರಾಂಶುಪಾಲ ಎಂ.ಕೆ. ನಾಯ್ಕ ಹೊಸಳ್ಳಿ ಮಾತನಾಡಿದರು. ಕೃತಿಕಾರ ಗಂಗಾಧರ ಕೊಳಗಿ ಅನಿಸಿಕೆ ವ್ಯಕ್ತಪಡಿಸಿದರು.

ಪೂರ್ಣಿಮಾ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಗೋಪಾಲ ನಾಯ್ಕ ಭಾಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಧಾರಾಣಿ ಕಾರ್ಯಕ್ರಮ ನಿರ್ವಹಿಸಿದರು. ಗೋಪಾಲ ಕಾನಳ್ಳಿ ಪ್ರಾರ್ಥಿಸಿದರು. ಅಣ್ಣಪ್ಪ ನಾಯ್ಕ ಶಿರಳಗಿ ಸ್ವಾಗತಿಸಿದರು. ವೆಂಕಟೇಶ ಮಡಿವಾಳ ಅವರು ಕೃತಿಕಾರರನ್ನು ಪರಿಚಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-20-1377080374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.