ಸಿದ್ದಾಪುರ: ರಕ್ತದಾನವು ಮಹಾದಾನ. ನಾವು ನೀಡುವ ಒಂದು ಯುನಿಟ್ ರಕ್ತವು ಮೂವರ ಜೀವ ಉಳಿಸಬಲ್ಲದು. ಯುವಜನತೆ ಇಂತಹ ಮಾನವೀಯ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಾಲ್ಲೂಕು ಆಸ್ಪತ್ರೆಯ ಕೌನ್ಸೆಲರ್ ಜಗದೀಶ ನಾಯ್ಕ ಹೇಳಿದರು.

ಪಟ್ಟಣದ ಎಂ.ಜಿ.ಸಿ. ಕಲಾ, ವಾಣಿಜ್ಯ ಹಾಗೂ ಜಿ.ಹೆಚ್.ಡಿ. ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ -ಸೇವಾ ಯೋಜನೆ ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಭಾಗಿಯಾಗಿ ಶುಕ್ರವಾರ ಮಾತನಾಡಿದರು.

ಪ್ರಾಚಾರ್ಯ ಜಗನ್ನಾಥ ಮೊಗೇರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರೆಡ್ಕ್ರಾಸ್ ಘಟಕದ ಸಂಚಾಲಕಿ ಸುಲೋಚನಾ ಸುಖಸಾರೆ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಚೇತನಾ ಎಂ.ಎಚ್ ಸ್ವಾಗತಿಸಿದರು. ಶಿಬಿರದಲ್ಲಿ ಕಾಲೇಜಿನ ಒಟ್ಟು 10 ವಿದ್ಯಾರ್ಥಿಗಳು, ಪ್ರಾಚಾರ್ಯರು ಹಾಗೂ ತಾಲ್ಲೂಕು ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಒಟ್ಟು 12 ಜನ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಸಂಸ್ಥೆಯ ವೈದ್ಯಕೀಯ ತಂಡ, ಕಾಲೇಜಿನ ಉಪನ್ಯಾಸಕರು ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-20-341856377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.