ಸಿದ್ದಾಪುರ: ಅರಣ್ಯವಾಸಿ ಮತ್ತು ಅಘನಾಶಿನಿ ನದಿ ಜೋಡಣೆ ವಿರೋಧಿ ಸಭೆಯನ್ನು ಮೇ 15ರಂದು ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ರಾಘವೇಂದ್ರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಹೋರಟಗಾರರ ವೇದಿಕೆಯ ಪ್ರಧಾನ ಸಂಚಾಲಕ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನೀತಿಗೆ ವಿರುದ್ಧವಾಗಿ ಅರಣ್ಯ ಅತಿಕ್ರಮಣದಾರರ ಮಹಜರ್ ಜರುಗುತ್ತಿರುವುದು ಮತ್ತು ಅರಣ್ಯವಾಸಿಗಳು ಅತಿಕ್ರಮಿಸಿರುವ ಮೂರು ಎಕರೆ ಸಾಗುವಳಿಗೆ ಆತಂಕ ಮಾಡಬಾರದೆಂಬ ರಾಜ್ಯ ಸರ್ಕಾರದ ಆದೇಶ ರದ್ದಿಗೆ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಆಕ್ಷೇಪಣಾ ಪತ್ರದ ಸ್ವೀಕೃತಿ ಪ್ರತಿ ವಿತರಿಸುವ ವಿಧಾನ ಹಾಗೂ ಯುನೆಸ್ಕೋ ವಿಶ್ವ ಪರಂಪರೆಯ ಕೇಂದ್ರದಿಂದ ಹೋರಾಟಗಾರರ ವೇದಿಕೆಗೆ ಬಂದಿರುವ ಉತ್ತರದ ಮಾಹಿತಿಯ ವಿಷಯವನ್ನು ಸಭೆಯಲ್ಲಿ ಚರ್ಚಿಸಲಾಗುವುದು.

ಹೋರಟಗಾರರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನದಿ ಜೋಡಣೆ ಆಯೋಗಕ್ಕೆ ಸ್ಥಳೀಯರಿಂದ ಆಕ್ಷೇಪಣೆಗೆ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-20-1590953928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.