ಸಿದ್ದಾಪುರ: ನಮ್ಮ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಧಾರ್ಮಿಕತೆ ಹಾಸುಹೊಕ್ಕಾಗಿದೆ. ದೇವರ ಮೇಲಿನ ಶ್ರದ್ಧೆ ನಾವು ಮಾಡುವ ಕೆಲಸ ಕಾರ್ಯಗಳಲ್ಲಿಯೂ ಅಡವಾಗಿರುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಾಲ್ಲೂಕಿನ ಹಲಗೇರಿ ಹೂಸೂರಿನ ಶ್ರೀಕ್ಷೇತ್ರ ಶನೇಶ್ಚರ ದೇವಾಲಯದಲ್ಲಿ ನಡೆದ 32 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶನಿವಾರ ಮಾತನಾಡಿದರು.

ಇಲ್ಲಿನ ಶನೇಶ್ಚರ ಕ್ಷೇತ್ರಕ್ಕೆ ಸಾಕಷ್ಟು ಭಾರಿ ನಾನು ಭೇಟಿ ಕೊಟ್ಟಿದ್ದೆನೆ. ಎಲ್ಲಾ ಭಕ್ತರ ಸಹಕಾರದೊಂದಿಗೆ ಕ್ಷೇತ್ರವು ಅಭಿವೃದ್ಧಿ ಹೊಂದುತ್ತಿದೆ. ಸಭಾಭವನ ಸೇರಿದಂತೆ ಎಲ್ಲಾ ರೀತಿಯ ಅಭಿವೃದ್ಧಿಗೂ ನಾನು ಕೈ ಜೋಡಿಸುತ್ತೇನೆ ಎಂದರು.

ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಮಾತನಾಡಿ, ಒಂದು ಗ್ರಾಮದ ಸಣ್ಣ ಸಮುದಾಯ ತನ್ನೆಲ್ಲ ಪ್ರಯತ್ನಗಳಿಂದ ಇಂತಹ ಸುಂದರವಾದ ಪರಿಸರದಲ್ಲಿ ದೇವಸ್ಥಾನ ನಿರ್ಮಿಸಿ 32 ವರ್ಷ ದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಇದೊಂದು ಶಕ್ತಿ ಸ್ಥಳ ಎನ್ನುವುದಕ್ಕೆ ಇಲ್ಲಿ ಸೇರಿರುವ ಭಕ್ತರೇ ಸಾಕ್ಷಿ . ಇಲ್ಲಿಯ ಅಭಿವೃದ್ಧಿ ಕಾರ್ಯದಲ್ಲಿ ಸರ್ಕಾರದ ಸಂಪೂರ್ಣ ಸಹಕಾರ ದೊರಕಿಸುವಲ್ಲಿ ನಾವೆಲ್ಲರೂ ಪ್ರಯತ್ನ ಮಾಡುತ್ತೆವೆ ಎಂದು ಅವರು ಹೇಳಿದರು.

ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಎ.ಜಿ.ನಾಯ್ಕ, ಹಿರಿಯ ಮುಖಂಡ ಎಸ್.ಕೆ.ಭಾಗವತ, ಹಲಗೇರಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೋಹಿನಿ ನಾಯ್ಕ, ಮಾಜಿ ಸದಸ್ಯ ದಿಲೀಪ್ ನಾಯ್ಕ, ಗ್ರಾಮ ಸಮಿತಿ ಅಧ್ಯಕ್ಷ ಬಲೀಂದ್ರ ನಾಯ್ಕ, ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಸವರಾಜ ಚನ್ನಯ್ಯ, ಆಡಳಿತ ಸಮಿತಿ ಅಧ್ಯಕ್ಷ ನಾಗರಾಜ ಗೌಡರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-20-8152187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.