ಸಿದ್ದಾಪುರ: ತಾಲ್ಲೂಕಿನ ಹಿತ್ಲಕೊಪ್ಪ ಸಮೀಪದ ಬರಡಹಳ್ಳಿ ಗ್ರಾಮದ ನಿವಾಸಿಗಳಾದ ಮಂಜಮ್ಮ ಮತ್ತು ತಿಮ್ಮ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಗೆ ಸೋಮವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ₹1 ಲಕ್ಷ ಕ್ಕೂ ಅಧಿಕ ಹಾನಿ ಆಗಿದೆ.

ಕೊಟ್ಟಿಗೆಯಿಂದ ದಿಢೀರ್ ಬೆಂಕಿಯ ಜ್ವಾಲೆ ಹಾಗೂ ದಟ್ಟ ಹೊಗೆ ಏಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ವಾಹನದೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

ಕೊಟ್ಟಿಗೆ ಮನೆಯಲ್ಲಿ ಯಾವುದೇ ಪ್ರಾಣಿಗಳು ಇಲ್ಲದ್ದರಿಂದ ಹೆಚ್ಚಿನ ಅನಾಹುತ ನಡೆದಿಲ್ಲ. ಕೊಟ್ಟಿಗೆಯಲ್ಲಿದ್ದ ಮೇವು ಮತ್ತು ಇತರ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-935555748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.