ಸಿದ್ದಾಪುರ: ಅಸಲಿ ಬಂಗಾರವೆಂದು ನಂಬಿಸಿ ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ₹10 ಲಕ್ಷ ದೋಚಿದ್ದ ಅಂತರ ಜಿಲ್ಲಾ ವಂಚಕರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮುದ್ದೇಶನಹಳ್ಳಿಯ ನಿವಾಸಿ ಗಜೇಂದ್ರ ಹಾಲೇಶಪ್ಪ ಕೊರಚರ (34) ಬಂಧಿತ. ಆರೋಪಿ ಆಕಾಶ ಎಂಬುವವನಿಗೆ ಒಂದು ಕೆ.ಜಿ. ತೂಕದ ಅಸಲಿ ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ಅವರಿಂದ ₹10 ಲಕ್ಷ ಪಡೆದುಕೊಂಡು ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ವಂಚಿಸಿದ್ದ.

ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡವು ಬನವಾಸಿ, ಆನವಟ್ಟಿ, ಶಿಕಾರಿಪುರ ಮತ್ತು ಶಿರಾಲಕೊಪ್ಪದಂತಹ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ, ಖಚಿತ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಸಹಾಯದಿಂದ ಆರೋಪಿ ಪತ್ತೆಹಚ್ಚಿದೆ. ಬಂಧಿತನಿಂದ ₹10 ಲಕ್ಷ ನಗದು ಮಾತ್ರವಲ್ಲದೆ, ಕೃತ್ಯಕ್ಕೆ ಬಳಸಿದ್ದ ₹20 ಸಾವಿರ ಮೌಲ್ಯದ ಬಜಾಜ್ ಡಿಸ್ಕವರಿ ಮೋಟಾರ್ ಸೈಕಲ್ ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.

ಸ್ಥಳೀಯ ಠಾಣೆಯಲ್ಲಿ ಫೆ.23ರಂದು ಪ್ರಕರಣ ದಾಖಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಸಿದ್ದಾಪುರ ಸಿಪಿಐ ಜಿ.ಬಿ. ಸೀತಾರಾಮ, ಪಿಎಸ್ಐ ಶಾಂತಿನಾಥ ಕೆ. ಪಾಸಾನೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-20-1437167339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.