ಸಿದ್ದಾಪುರ: ಮಳೆಗಾಲ ಸಮೀಪಿಸುತ್ತಿದ್ದು, ಮಳೆಗಾಲದ ಪೂರ್ವ ಕೈಗೊಳ್ಳುವ ಕೆಲಸಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಇಲಾಖೆಯವರು ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಡಳಿತಾಧಿಕಾರಿ ಡಿ.ಆರ್. ನಾಯ್ಕ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಹೆಸ್ಕಾಂ ಇಲಾಖೆಯವರು ವಿದ್ಯುತ್ ತಂತಿಯ ಮೇಲೆ ಬಂದಿರುವ ರೆಂಬೆಗಳನ್ನು ಕತ್ತರಿಸಬೇಕು. ಶಾಲೆಗಳು ಪ್ರಾರಂಭವಾಗಲಿದ್ದು, ಅಡುಗೆಮನೆ ಸ್ವಚ್ಛತೆಯ ಬಗ್ಗೆ ಗಮನ ಕೊಡಬೇಕು. ತರಗತಿಯ ಕೊಠಡಿಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಮಕ್ಕಳಿಗೆ ಶುದ್ಧ ನೀರು ಸಿಗುವ ವ್ಯವಸ್ಥೆ ಮಾಡಬೇಕು ಎಂದರು.

ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ನಾಯ್ಕ ಮಾತನಾಡಿ, ಮಂಗನ ಕಾಯಿಲೆಗೆ ಸಂಬಂಧಿಸಿದ ರಕ್ತಪರೀಕ್ಷೆಯನ್ನು ಶಿರಸಿಯಲ್ಲಿರುವ ಪ್ರಯೋಗಾಲಯದಲ್ಲಿ ನಡೆಸಲಾಗುತ್ತಿದೆ. ಕಚೇರಿಗೆ ಸಂಬಂಧಿಸಿದಂತೆ ವಿದ್ಯುತ್ ಮತ್ತು ದೂರವಾಣಿ ಬಿಲ್ ತುಂಬಲು ಅನುದಾನ ಬೇಕಾಗಿದೆ ಎಂದರು.

ಮೇ 29ಕ್ಕೆ ಶಾಲೆಗಳು ಪ್ರಾರಂಭವಾಗಲಿವೆ. ಸರ್ಕಾರದ ಸೂಚನೆಯಂತೆ 5 ವರ್ಷ 9 ತಿಂಗಳು ತುಂಬಿದ ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು. ಶೇ 46ರಷ್ಟು ಪಠ್ಯ-ಪುಸ್ತಕಗಳು ಬಂದಿವೆ. ಶೇ 80ರಷ್ಟು ಬಂದನಂತರ ವಿತರಿಸಲಾಗುವುದು. ಪ್ರಾಥಮಿಕ ಶಾಲಾ ವಿಭಾಗದಲ್ಲಿ 160 ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 23 ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರ ನೇಮಕದ ಬಗ್ಗೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ ಸಭೆಗೆ ತಿಳಿಸಿದರು.

ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಹೊಸಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಹಳೆಯ ಕಟ್ಟಡವನ್ನು ಖುಲ್ಲಾಪಡಿಸಲು ತಿಳಿಸಿದ್ದಾರೆ. ಆದ್ದರಿಂದ ವಸತಿನಿಲಯವನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಈಗಾಗಲೇ ಬಾಡಿಗೆ ಕಟ್ಟಡವನ್ನು ಗುರುತಿಸಲಾಗಿದೆ ಎಂದು ಸಮಾಜಲ್ಯಾಣ ಇಲಾಖೆಯ ಕೇಶವಮೂರ್ತಿ ತಿಳಿಸಿದರು.

ಸಂಪೂರ್ಣವಾಗಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವವರೆಗೆ ಹಾಲಿ ಇರುವ ಕಟ್ಟಡವನ್ನು ಖುಲ್ಲಾಪಡಿಸಬಾರದು. ಊಟದ ವಿಚಾರದಲ್ಲಿ ನಿರ್ಲಕ್ಷ್ಯವಹಿಸಬಾರದು. ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಆಹಾರಧಾನ್ಯದ ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದು ಡಿ.ಆರ್.ನಾಯ್ಕ ಸೂಚಿಸಿದರು.

ತಾ.ಪಂ ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತ್ತಲಕೊಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-20-1812806192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.