ಸಿದ್ದಾಪುರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಅವರ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆಗೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಗೈರಾಗಿರುವುದನ್ನು ಖಂಡಿಸಿದ ದಲಿತ ಮುಖಂಡರು, ಒಕ್ಕೊರಲಿನಿಂದ ಸಭೆಯನ್ನು ಬಹಿಷ್ಕರಿಸಿ ಹೊರನಡೆದ ಘಟನೆ ಮಂಗಳವಾರ ನಡೆದಿದೆ.

ಈ ಕುರಿತು ಮಾತನಾಡಿದ ಅಂಬೇಡ್ಕರ್ ಶಕ್ತಿ ಸಂಘದ ಅಧ್ಯಕ್ಷ ನಂದನ್ ಬೋರ್ಕರ್, ಈ ಹಿಂದೆ ನಡೆದ ದಲಿತರ ಕುಂದುಕೊರತೆ ಸಭೆಗಳಲ್ಲೂ ಇದೇ ರೀತಿ ಅಧಿಕಾರಿಗಳು ಗೈರುಹಾಜರಾಗಿದ್ದರು. ಕೇವಲ ಕೆಳಹಂತದ ಸಿಬ್ಬಂದಿಗಳಿಂದ ಸಭೆ ನಡೆಸುವುದು ಎಷ್ಟು ಸಮಂಜಸ? ಅಧಿಕಾರಿಗಳಿಲ್ಲದ ಸಭೆಯಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು.

ಸಭೆಗೆ ಅಧಿಕಾರಿಗಳು ಹಾಜರಾಗುವವರೆಗೆ ನಾವು ಯಾವುದೇ ಪೂರ್ವಭಾವಿ ಸಭೆಗಳಲ್ಲಿ ಭಾಗವಹಿಸುವುದಿಲ್ಲ. ಸಭೆಗೆ ಹಾಜರಾಗಬೇಕಿದ್ದ ವಿವಿಧ ಇಲಾಖೆಯ ಮುಖ್ಯಸ್ಥರು ಬರುವ ಬದಲಾಗಿ, ತಮ್ಮ ಪರವಾಗಿ ಹೊರಗುತ್ತಿಗೆ ನೌಕರರನ್ನು ಅಥವಾ ಕೆಳಹಂತದ ಸಿಬ್ಬಂದಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಣೆಯಂತಹ ಪ್ರಮುಖ ಸಭೆಗಳಿಗೆ ಅಧಿಕಾರಿಗಳು ತೋರುತ್ತಿರುವ ಇಂತಹ ನಿರ್ಲಕ್ಷ್ಯದ ಧೋರಣೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿ.ಎಸ್.ಎಸ್ ಮುಖಂಡ ಎಚ್.ಕೆ. ಶಿವಾನಂದ ಮಾತನಾಡಿ, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಚಂದ್ರು ಕಾನಡೆ, ಪುಟ್ಟಪ್ಪ ವಾಲ್ಮೀಕಿ, ಎಚ್ ಎನ್ ಕಿರಣ ಕುಮಾರ, ವಿನಾಯಕ್ ಅಗ್ಗೇರಿ, ಕಮಲಾಕರ್ ಜೋಗಳೇಕರ್, ಅಣ್ಣಪ್ಪ ಶಾನಬಾಳೆಗದ್ದೆ, ಮಾರುತಿ ಬೋರ್ಕರ್, ದ್ಯಾವ ಚಲವಾದಿ, ಲಕ್ಷ್ಮಣ ಬೋರಕರ, ರಮೇಶ ಬೇಡರ್, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-20-542352722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.