ಸಿದ್ದಾಪುರ: ಕರ್ತವ್ಯನಿರತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

‘ತಾಲ್ಲೂಕಿನ ಶಿರಳಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ ಆರ್. ನಾಯ್ಕ ಅವರ ಮೇಲೆ ಪ್ರಭು ದೊಡ್ಡಮನೆ ಎಂಬಾತ ಕಚೇರಿ ವೇಳೆಯಲ್ಲಿ ನಿಯಮಬಾಹಿರ ಪರವಾನಗಿ ನೀಡುವಂತೆ ಒತ್ತಾಯಿಸಿರುವುದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವುದು ತಾಲ್ಲೂಕಿನ ಎಲ್ಲ ನೌಕರರ ಮನೋಸ್ಥೆರ್ಯ ಕುಗ್ಗಿಸುವಂತೆ ಮಾಡಿದೆ. ತಕ್ಷಣ ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಅನಿವಾರ್ಯವಾಗಿ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ. ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಕ್ರಮವಹಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-20-928298246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.