ಸಿದ್ದಾಪುರ: ಗ್ರಾಮದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಗ್ರಾಮಸ್ಥರು ಸಾಮರಸ್ಯದಿಂದ ಬದುಕಲು ಸಾಧ್ಯ’ ಎಂದು ಆಧಾರ ಸಂಸ್ಥೆಯ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡು ಹೇಳಿದರು.

ತಾಲ್ಲೂಕಿನ ಕಳೂರಿನಲ್ಲಿ ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾಸಂಘ ದೊಡ್ಮನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಯಕ್ಷೋತ್ಸವ 2026ರ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರೀ ಕೋಟೆಗದ್ದೆ, ಕಳೂರಿನ ಕಲ್ಲೇಶ್ವರ ದೇವಾಲಯ ಕಮಿಟಿ ಕಾರ್ಯದರ್ಶಿ ಮಹೇಶ ನಾಯ್ಕ ಮಾತನಾಡಿದರು. ಭಾಸ್ಕರ ಹೆಗಡೆ ಕೊಡಗಿಬೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಡಿಗದ್ದೆ ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಹೆಗಡೆ ವಾಜಗೋಡ ಇದ್ದರು.

ಈ ವೇಳೆ ಕಳೂರು ದೇವಾಲಯದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿರುವ ಶ್ಯಾಮಲಾ ಶ್ರೀಧರ ಗುಡಿಗಾರ ಬಿಳಗಿ ಹಾಗೂ ಪುತ್ರ ವಿನಾಯಕ ಶ್ರೀಧರ ಗುಡಿಗಾರ ಅವರನ್ನು ಸನ್ಮಾನಿಸಲಾಯಿತು. ವೀಣಾ ನಾಯ್ಕ ಸನ್ಮಾನಪತ್ರ ವಾಚಿಸಿದರು. ಯಕ್ಷಗಾನ ಸಂಘದ ಕಾರ್ಯದರ್ಶಿ ಕೇಶವ ಹೆಗಡೆ ಕಿಬ್ಳೆ ಸ್ವಾಗತಿಸಿ, ನಿರೂಪಿಸಿದರು. ಆಶ್ರಿತಾ ಹೆಗಡೆ ಹಳ್ಳಿಬೈಲ್ ವಂದಿಸಿದರು.

ಹಲಸಿನಹಳ್ಳಿ ನರಸಿಂಹ ಶಾಸ್ತ್ರೀ ವಿರಚಿತ ಧರ್ಮಾಂಗದ ದ್ವಿಗ್ವಿಜಯ ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-20-2029065780

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.