ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ | ಏಳನೇ ವೇತನ ಆಯೋಗ ಜಾರಿಗೆ ಒತ್ತಾಯ

Published 10 ಜುಲೈ 2024, 15:28 IST
Last Updated 10 ಜುಲೈ 2024, 15:28 IST
ಅಕ್ಷರ ಗಾತ್ರ

ಶಿರಸಿ: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಮಾಡಬೇಕು ಎಂದು ಆಗ್ರಹಿಸಿ ನಗರದ ಶಾಸಕರ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಿರಸಿ ಶೈಕ್ಷಣಿಕ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು‌.

ಬುಧವಾರ ಶಾಸಕ ಭೀಮಣ್ಣ ನಾಯ್ಕ ಅವರನ್ನು ಭೇಟಿ ಮಾಡಿದ ನೌಕರರ ಸಂಘಟನೆ ಪ್ರಮುಖರು, ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 3 ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲ್ಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿದೆ. ಕಾರಣ ಇವರಿಗೆ ಪೂರಕವಾಗುವಂತೆ ರಾಜ್ಯ ಏಳನೇ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. 

ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. 

ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘ ಶಿರಸಿ ಶೈಕ್ಷಣಿಕ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ್ ನಾಯ್ಕ, ರಾಜ್ಯ ಪರಿಷತ್ ಸದಸ್ಯ ಅಶೋಕ್ ಪಡುವಳ್ಳಿ, ಖಜಾಂಚಿ ಜಯದೇವ್ ಮತ್ತೂರ್, ಕಾರ್ಯದರ್ಶಿ ವಸಂತ್ ಹಾಗೂ ರಮೇಶ್ ಶೆಟ್ಟಿ, ಜೂಜೇ ಫರ್ನಾಂಡೀಸ್, ರಮೇಶ ಹೆಗಡೆ, ಸುರೇಶ್ ಪಟಗಾರ, ಎಸ್.ಜಿ.ಹೆಗಡೆ, ದಿವಾಕರ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT