ಶಿರಸಿ: ಇಲ್ಲಿನ ನಾರಾಯಣಗುರು ನಗರದ ಅಭಯ ವಿನಾಯಕ ದೇವಸ್ಥಾನದ 19ನೇ ವಾರ್ಷಿಕೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದ್ದು, ಅಸಂಖ್ಯ ಭಕ್ತರು ಪಾಲ್ಗೊಂಡರು.

ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಹಾಗೂ ನವಗ್ರಹ ಹೋಮ ಸೇರಿದಂತೆ ವಿವಿಧ ವೈದಿಕ ವಿಧಿವಿಧಾನಗಳು ನಡೆದವು. ವಿಶೇಷವಾಗಿ ಅಲಂಕೃತಗೊಂಡಿದ್ದ ವಿನಾಯಕನಿಗೆ ಮಹಾಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಮಧ್ಯಾಹ್ನ ಆಯೋಜಿಸಿದ್ದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಸಂಜೆ ನಡೆದ ದೇವರ ಪಲ್ಲಕ್ಕಿ ಉತ್ಸವವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ವಾದ್ಯಘೋಷಗಳೊಂದಿಗೆ ಸಾಗಿದ ಮೆರವಣಿಗೆಯು ಸುರಿಯುವ ಮಳೆಯ ನಡುವೆಯೂ ಅತ್ಯಂತ ಸಡಗರದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಭಕ್ತರು ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ, ದೇವರಿಗೆ ಭಕ್ತಿಯಿಂದ ಆರತಿ ಬೆಳಗಿ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಆರ್.ಎನ್.ಶೇಟ್, ಪ್ರಮುಖರಾದ ಜೀವನ ಪೈ, ನವೀನ ಶೆಟ್ಟಿ, ಜಗನ್ನಾಥ ಗೋಕರ್ಣ, ಗಣಪತಿ ಆಚಾರಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ನಾರಾಯಣಗುರು ನಗರದ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-20-1635532038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.