ಶಿರಸಿ: ‘ಕೃಷಿ ವಲಯ ಹಾಗೂ ಮಾರುಕಟ್ಟೆಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೋಟ್ಯಂತರ ರೂಪಾಯಿ ಅನುದಾನ ತಂದು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ₹2.14 ಕೋಟಿ ಅಂದಾಜು ವೆಚ್ಚದ ಕಾಂಪೌಂಡ್ ಹಾಗೂ ಸಿ.ಸಿ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.

‘ತಾಲ್ಲೂಕಿನ ರೈತರು ಹಾಗೂ ವರ್ತಕರ ಆರ್ಥಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿರುವ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ’ ಎಂದರು.

‘ಎಪಿಎಂಸಿಗೆ ಪ್ರತಿದಿನ ನೂರಾರು ರೈತರು ಹಾಗೂ ವ್ಯಾಪಾರಸ್ಥರು ಬರುತ್ತಾರೆ. ಹಾಗಾಗಿ, ಮಾರುಕಟ್ಟೆ ಆವರಣದಲ್ಲಿ ಸುರಕ್ಷತೆ ಹಾಗೂ ನೈರ್ಮಲ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬಲಿಷ್ಠವಾದ ಕಾಂಪೌಂಡ್ ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಿ.ಸಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿಗಳಿಂದ ಮಾರುಕಟ್ಟೆಯ ಚಿತ್ರಣವೇ ಬದಲಾಗಲಿದ್ದು, ರೈತರಿಗೆ ಪೂರಕ ವಾತಾವರಣ ಸಿಗಲಿದೆ’ ಎಂದರು.

‘ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ನಿಗದಿತ ಕಾಲಮಿತಿಯೊಳಗೆ ಹಾಗೂ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಬೇಕೆಂದು ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರ ತೆರಿಗೆ ಹಣ ಸದ್ಬಳಕೆಯಾಗಬೇಕು’ ಎಂದು ಎಚ್ಚರಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಮುಖರು, ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರು, ವರ್ತಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-20-305358522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.