ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ | ಅಂಬ್ಯುಲೆನ್ಸ್‌ ಕಾರ್ಯಾಚರಣೆಗೆ ಚಾಲನೆ

Published 10 ಜುಲೈ 2024, 14:12 IST
Last Updated 10 ಜುಲೈ 2024, 14:12 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಬನವಾಸಿ ಭಾಗಕ್ಕೆ ನೂತನವಾಗಿ ಮಂಜೂರಾದ ಆರೋಗ್ಯ ಕವಚ 108 ಅಂಬ್ಯುಲೆನ್ಸ್‌ನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್ ಸ್ವತಃ ಚಾಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ನಂತರ ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ನೀಡುವ ಮೊಬೈಲ್ ಫೋನ್‌ಗಳನ್ನು ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಅವರು, ಬನವಾಸಿ ಭಾಗಕ್ಕೆ ಹೊಸ ಅಂಬ್ಯುಲೆನ್ಸ್ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಬಳಿ ವಿನಂತಿಸಿದಾಗ ಸ್ಪಂದಿಸಿ, ನೀಡಿದ್ದಾರೆ. ಬನವಾಸಿ ಹೋಬಳಿಯಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಡವರ ಜೀವದ ರಕ್ಷಣೆಯಾಗಿ, ಉತ್ತಮ ಆರೋಗ್ಯ ಸೇವೆ ದೊರೆಯಬೇಕೆಂದು ಹೊಸ ಅಂಬ್ಯುಲೆನ್ಸ್ ತಂದಿದ್ದೇನೆ. ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 4 ವರ್ಷದಿಂದ ಎಂಬಿಬಿಎಸ್ ವೈದ್ಯೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಉಳಿಯೋದು ಕಡಿಮೆ. ಇಲ್ಲಿನ ವೈದ್ಯಾಧಿಕಾರಿ ಡಾ.ಜಯಶ್ರೀ ಜನರ ಪ್ರೀತಿ, ವಿಶ್ವಾಸ ಗಳಿಸಿ, ಉತ್ತಮ ಆರೋಗ್ಯ ಸೇವೆ ನೀಡುತ್ತಿದ್ದಾರೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ತಮ್ಮ ಇಲಾಖೆಯ ಕೆಲಸ ನಿರ್ವಹಿಸಲು ಅನುಕೂಲವಾಗಲೆಂದು ಆಂಡ್ರಾಯ್ಡ್ ಮೊಬೈಲ್ ಫೋನ್ ವಿತರಿಸುತ್ತಿದ್ದಾರೆ. ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯರು ಮಕ್ಕಳಿಗೆ ತಾಯಿ ಪ್ರೀತಿ ನೀಡಿ, ಅವರಿಗೆ ವಿದ್ಯಾಭ್ಯಾಸ ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದಾರೆ. ಅವರನ್ನು ಅಭಿನಂದಿಸಬೇಕಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಯಶ್ರೀ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರೂಪಾ ನಾಯ್ಕ, ಬಸವರಾಜ ದೊಡ್ಮನಿ, ಸಿಡಿಪಿಒ ವೀಣಾ ಸಿರ್ಸಿಕರ, ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಸಿ.ಎಫ್.ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT