ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಯ ಈಡಿಗ ಸಮಾಜದ ಚಿಂತನಾ ಸಭೆ

ಜೂನ್ 3, 4ಕ್ಕೆ ಕುಮಟಾದಲ್ಲಿ ಆಯೋಜನೆ
Published 28 ಮೇ 2023, 14:27 IST
Last Updated 28 ಮೇ 2023, 14:27 IST
ಅಕ್ಷರ ಗಾತ್ರ

ಶಿರಸಿ; ರಾಷ್ಟ್ರೀಯ ಆರ್ಯ ಈಡಿಗ ಸಮಾಜದ ಚಿಂತನಾ ಸಭೆಯು ಜೂ.3 ಹಾಗೂ 4ರಂದು ಕುಮಟಾದ ನಾಮಧಾರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಆರ್ಯ ಈಡಿಗ ಮಹಾಮಂಡಳ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ನಾಯ್ಕ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಮಾಹಿತಿ ನೀಡಿದ ಅವರು, ಜೂ.3ರಂದು ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಂತರ ಜನಪ್ರತಿನಿಧಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚಿಂತನಾ ಸಭೆಯಲ್ಲಿ ಆರ್ಯ ಈಡಿಗ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಚರ್ಚಿಸಲಾಗುವುದು. ನಾರಾಯಣ ಗುರುಗಳ ಪ್ರತಿಮೆಯನ್ನು ವಿಧಾನಸೌಧದ ಎದುರು ಅನಾವರಣಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ನಾರಾಯಣ ಗುರುಗಳ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಸತಿ ಶಾಲೆ ಸೇರಿ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದರು. ಈ ವೇಳೆ ಬಾಲಕೃಷ್ಣ ನಾಯ್ಕ, ದೇವರಾಜ್ ನಾಯ್ಕ ,ಭಾಸ್ಕರ್ ನಾಯ್ಕ ಇದ್ದರು.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT