ಶಿರಸಿ: ‘ಆಟೊ ಚಾಲಕರು ನಗರದ ಸಾರಿಗೆ ವ್ಯವಸ್ಥೆಯ ಬೆನ್ನೆಲುಬು. ಬಿಸಿಲು, ಮಳೆ ಎನ್ನದೇ ಸಾರ್ವಜನಿಕರಿಗೆ ಸೇವೆ ನೀಡುವ ಶ್ರಮಿಕ ವರ್ಗಕ್ಕೆ ಕನಿಷ್ಠ ಸೌಲಭ್ಯಗಳಿರುವ ನಿಲ್ದಾಣದ ಅಗತ್ಯವಿತ್ತು. ಚಾಲಕರ ದಶಕಗಳ ಈ ಬೇಡಿಕೆ ಈಡೇರಿಸುತ್ತಿರುವುದು ಹೆಚ್ಚಿನ ತೃಪ್ತಿ ನೀಡಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಕೇಂದ್ರಿಯ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರ ಆಟೊ ರಿಕ್ಷಾ ಚಾಲಕರ ಬಹುಕಾಲದ ಬೇಡಿಕೆಯಾಗಿದ್ದ ಸುಸಜ್ಜಿತ ಆಟೋ ನಿಲ್ದಾಣದ ಕಾಮಗಾರಿಗೆ ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕಾರ್ಮಿಕ ವರ್ಗದ ಹಿತರಕ್ಷಣೆ ಮತ್ತು ಅವರಿಗೆ ಪೂರಕವಾದ ಮೂಲಸೌಕರ್ಯಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನಿಲ್ದಾಣದ ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು ಮತ್ತು ಮಳೆಗಾಲಕ್ಕೂ ಮುನ್ನ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರಿಯ ಬಸ್ ನಿಲ್ದಾಣದ ಆವರಣದಲ್ಲಿ ಹತ್ತಾರು ವರ್ಷಗಳಿಂದ ಸರಿಯಾದ ನಿಲ್ದಾಣವಿಲ್ಲದೇ ಚಾಲಕರು ಹಾಗೂ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದರು. ಶಾಸಕರ ಈ ಶೀಘ್ರ ಸ್ಪಂದನೆಗೆ ಆಟೊ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ಚಾಲಕರು ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಸದಸ್ಯರು, ಸಾರಿಗೆ ಇಲಾಖೆಯ ಅಧಿಕಾರಿಗಳು, ಆಟೊ ಚಾಲಕರ ಸಂಘದ ಪ್ರಮುಖ ಮುಖಂಡರು ಹಾಗೂ ನೂರಾರು ಆಟೊ ಚಾಲಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-1216707631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.