ಶಿರಸಿ: ಎರಡನೇ ಮದುವೆಯ ಸಂಭ್ರಮದಲ್ಲಿದ್ದ ವೈದ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿರಸಿ ನಗರದ ಕೆ.ಎಚ್.ಬಿ. ಕಾಲೋನಿ ಹೊಸ ಬಡಾವಣೆಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ, ಆಯುರ್ವೇದ ವೈದ್ಯ ಡಾ. ರಮೇಶ ಕಲಘುಟಕರ (51) ಕೊಲೆಯಾದ ವ್ಯಕ್ತಿ. ಶನಿವಾರ ರಾತ್ರಿಯೇ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಭಾನುವಾರ ರಾತ್ರಿ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ವೈದ್ಯರ ಪತ್ನಿ ಐದು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರು ಸೋಮವಾರದಂದು ಮಂಜಗುಣಿಯಲ್ಲಿ ತಮ್ಮ ಪತ್ನಿಯ ತಂಗಿಯ ಜತೆ ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದರು.

ಮನೆಯಲ್ಲಿ ಒಬ್ಬರೇ ಇರುತ್ತಿದ್ದ ವೈದ್ಯರನ್ನು ಭೇಟಿಯಾಗಲು ಭಾನುವಾರ ಸಂಜೆ ಸಂಬಂಧಿಕರು ಬಂದಿದ್ದರು. ಈ ವೇಳೆ ಮನೆಗೆ ಬೀಗ ಹಾಕಿರುವುದು ಕಂಡುಬಂದಿದೆ. ಎಷ್ಟೇ ಕರೆ ಮಾಡಿದರೂ ಒಳಗಿನಿಂದ ಪ್ರತಿಕ್ರಿಯೆ ಬಾರದಿದ್ದಾಗ, ಅನುಮಾನಗೊಂಡ ಸಂಬಂಧಿಕರು ಬಾಗಿಲು ಮುರಿದು ಒಳಪ್ರವೇಶಿಸಿದ್ದಾರೆ. ಆಗ ಡಾ. ರಮೇಶ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಡಿಎಸ್ಪಿ ಗೀತಾ ಪಾಟೀಲ, ಸಿಪಿಐ ಶಶಿಕಾಂತ ವರ್ಮ ಹಾಗೂ ಮಾರುಕಟ್ಟೆ ಠಾಣೆಯ ಪಿಎಸ್ಐ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ವಿಧಿವಿಜ್ಞಾನ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ. ಮೃತ ವೈದ್ಯರಿಗೆ ಇಬ್ಬರು ಪುತ್ರರಿದ್ದು, ಒಬ್ಬರು ಬೆಂಗಳೂರಿನಲ್ಲಿ ಹಾಗೂ ಇನ್ನೊಬ್ಬರು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ. ಈ ಕುರಿತು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.