ಶಿರಸಿ: ಬನವಾಸಿ ಭಾಗದಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ಅಸಮರ್ಪಕ ವಿದ್ಯುತ್ ಪೂರೈಕೆಯು ಕೃಷಿಕರ ಬದುಕನ್ನು ದುಸ್ತರವಾಗಿಸಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ರೈತ ಮೋರ್ಚಾ ಬನವಾಸಿ ಮಂಡಲದ ವತಿಯಿಂದ ಬೈಕ್ ರ್ಯಾಲಿ ಹಾಗೂ ಪಾದಯಾತ್ರೆ ಹಮ್ಮಿಕೊಂಡು ಹೆಸ್ಕಾಂ ಕಚೇರಿ ಎದುರು ಪ್ರತಿಭಟಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಬಿಜೆಪಿ ಬನವಾಸಿ ಮಂಡಲದ ಅಧ್ಯಕ್ಷ ರಮೇಶ ನಾಯ್ಕ, ‘ಬನವಾಸಿ ಭಾಗದ ವಿದ್ಯುತ್ ಪೂರೈಕೆಯಲ್ಲಿ ವ್ಯವಸ್ಥಿತವಾಗಿ ತಾರತಮ್ಯ ಎಸಗಲಾಗುತ್ತಿದೆ’ ಎಂದು ಆರೋಪಿಸಿದರು.

‘ಶಿರಸಿಯ ಪೂರ್ವ ಭಾಗದ ಜನರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಬನವಾಸಿಯ ಕಡಗೋಡದಲ್ಲಿ ಅದ್ದೂರಿಯಾಗಿ ಗ್ರಿಡ್ ಉದ್ಘಾಟನೆಗೊಂಡು ಐದು ವರ್ಷಗಳೇ ಕಳೆದಿದ್ದರೂ, ಈವರೆಗೂ ಅಲ್ಲಿಂದ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದು ಸ್ಥಳೀಯ ಶಾಸಕರ ಆಡಳಿತಾತ್ಮಕ ವೈಫಲ್ಯ ಮತ್ತು ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ವಿದ್ಯುತ್ ಇಲ್ಲದೆ ಏತ ನೀರಾವರಿ ಯೋಜನೆಗಳು ಸಂಪೂರ್ಣವಾಗಿ ಹಳಿ ತಪ್ಪಿವೆ. ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗದೆ ರೈತರು ಕಂಗಾಲಾಗಿದ್ದಾರೆ. ತಕ್ಷಣ ಸಮಸ್ಯೆಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕು’ ಎಂದು ಒತ್ತಾಯಿಸಿದರು.

ಮೋರ್ಚಾ ಪ್ರಮುಖ ವಿ.ಎಂ.ಹೆಗಡೆ ಮಾತನಾಡಿ, ‘ಲೋ ವೋಲ್ಟೇಜ್ ಸಮಸ್ಯೆಯಿಂದಾಗಿ ರೈತರ ಪಂಪ್ಸೆಟ್ಗಳು ಪದೇ ಪದೇ ಸುಟ್ಟು ಹೋಗುತ್ತಿವೆ. ದುಬಾರಿ ಬೆಲೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಡಿಕೆ, ಬಾಳೆ ಸೇರಿದಂತೆ ಪ್ರಮುಖ ತೋಟಗಾರಿಕಾ ಬೆಳೆಗಳು ನೀರಿನ ಅಭಾವದಿಂದ ನಾಶವಾಗುತ್ತಿವೆ. ಇಷ್ಟೆಲ್ಲಾ ಸಂಕಷ್ಟಗಳಿದ್ದರೂ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿರುವುದು ನಾಚಿಕೆಗೇಡಿನ ಸಂಗತಿ. ಬನವಾಸಿ ಗ್ರಿಡ್ಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ರೈತರ ಹಿತ ಕಾಯಬೇಕು’ ಎಂದು ಆಗ್ರಹಿಸಿದರು.

ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ‘ಹೆಸ್ಕಾಂ ಅಧಿಕಾರಿಗಳು ಕೇವಲ ಭರವಸೆ ನೀಡದೆ ಕೆಲಸ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರ ಸ್ವರೂಪ ಪಡೆಯುತ್ತದೆ’ ಎಂದರು.

ಹೆಸ್ಕಾಂ ಎಂಜಿನಿಯರ್ ಸುನೀಲಕುಮಾರ ಜಿ ಮನವಿ ಸ್ವೀಕರಿಸಿದರು. ಶೀಘ್ರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಈ ವೇಳೆ ಎಚ್ಚರಿಸಿದರು. ಆನಂದ ಸಾಲೇರ, ಉಷಾ ಹೆಗಡೆ, ಶಂಕರ ಗೌಡ, ರಾಘವೇಂದ್ರ ನಾಯ್ಕ ಸೇರಿದಂತೆ ಬನವಾಸಿ ಮಂಡಲದ ಕಾರ್ಯಕರ್ತರು ಹಾಗೂ ಕೃಷಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-20-594739165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.