‘ಸ್ವಚ್ಛತೆಗೆ ಆದ್ಯತೆ ಅಗತ್ಯ’
ನಗರದಲ್ಲಿ ಬೀದಿಬದಿ ವ್ಯಾಪಾರಿ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಲ್ಲೆಂದರಲ್ಲಿ ಹೊಟೇಲ್‍ಗಳು ತಲೆ ಎತ್ತುತ್ತಿವೆ. ಸ್ವಚ್ಛತೆಗೆ ಆದ್ಯತೆಯಿಲ್ಲ. ಇದು ಸಾರ್ವಜನಿಕ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಬಗ್ಗೆ ಕ್ರಮ ವಹಿಸಬೇಕು. ತರಕಾರಿ ಮಾರುಕಟ್ಟೆಯಲ್ಲಿ ನಗರಸಭೆ ಮಳಿಗೆ ಪಡೆದು ತರಕಾರಿ ಅಂಗಡಿ ನಡೆಸುವವರ ಹಲವು ತರಕಾರಿ ಅಂಗಡಿಗಳು ಬೀದಿ ಬದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಶಾಶ್ವತ ತರಕಾರಿ ಮಾರುಕಟ್ಟೆ ನಿರ್ಮಿಸಲು ಕ್ರಮವಾಗಬೇಕು’ ಎಂದು ಸಭೆಯಲ್ಲಿ ಪಾಲ್ಗೊಂಡ ಕೆಲ ಸಾರ್ವಜನಿಕರು ಆಗ್ರಹಿಸಿದರು.