ಶಿರಸಿ: ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಲು ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ತಾಲ್ಲೂಕಿನ ಭೈರುಂಬೆ ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಭೈರುಂಬೆ, ಹುಲೇಕಲ್, ಸೋಂದಾ, ಸಾಲ್ಕಣಿ, ಓಣಿಕೇರಿ, ವಾನಳ್ಳಿ, ಕೊಡ್ನಗದ್ದೆ ಭಾಗದಿಂದ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್, ‘ರಾಜ್ಯ ಕಾಂಗ್ರೆಸ್ ಸರ್ಕಾರ ಮುಡಾ ಹಗರಣದಿಂದ ಆರಂಭಿಸಿ ಸಾಲು ಸಾಲು ಹಗರಣಗಳನ್ನು ಮಾಡಿದೆ. ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕುರಿತು ಕಾಂಗ್ರೆಸ್ ಶಾಸಕರೇ ಮಾತನಾಡಿದ್ದಾರೆ. ವಿದ್ಯುತ್, ಸ್ಟಾಂಪ್ ಡ್ಯೂಟಿ ದರ ಏರಿಕೆ, ಹೀಗೆ ದರ ಏರಿಕೆ ಮಾಡುತ್ತಾ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ’ ಎಂದು ದೂರಿದರು.

‘ಈಗಾಗಲೇ ಆಶ್ರಯ ಮನೆ ಮಂಜೂರಾಗಿ ಕೆಲಸ ಪ್ರಾರಂಭಿಸಿರುವ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಮಳೆ ಮಾಪಕ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ರೈತರಿಗೆ ಬೆಳೆವಿಮೆ ಹಣದ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸುವ ಧೈರ್ಯವೂ ಕಾಂಗ್ರೆಸ್ ಸರ್ಕಾರಕ್ಕಿಲ್ಲ’ ಎಂದರು.

ನಂತರ ಭೈರುಂಬೆ ಪಂಚಾಯಿತಿ ಪಿಡಿಒ ಮಂಜುನಾಥ ನಾಯಕ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮಹಿಳಾ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷೆ ಅನಸೂಯಾ ಕಡಬಾಳ, ಗ್ರಾಮ ಪಂಚಾಯಿತಿ ಸದಸ್ಯರಾದ ಕಿರಣ ಭಟ್, ರಾಘವ ಜಡ್ಡಿಗದ್ದೆ, ಪ್ರಮುಖರಾದ ಮಂಜುನಾಥ ಭಂಡಾರಿ, ಶೇಖರ ಕರೆದಡ್ಡಿ, ಭರತ ನಾಯ್ಕ ವಿನಾಯಕ ಹೆಗಡೆ, ಸುರೇಶ್ಚಂದ್ರ ಹೆಗಡೆ, ನರಸಿಂದ ಹೆಗಡೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.