ಶಿರಸಿ: ನಗರದ ಆಯುರ್ವೇದ ವೈದ್ಯರೊಬ್ಬರನ್ನು ಕೊಲೆ ಮಾಡಿ ನಗದು, ಆಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಂಜುನಾಥ ಪಾಂಡುರಂಗ ನಾಯ್ಕ (68) ಬಂಧಿತ.

ನಗರದ ಕೆಎಚ್ಬಿ ಕಾಲೊನಿ ಹೊಸ ಬಡಾವಣೆ ನಿವಾಸಿ ಡಾ. ರಮೇಶ ಕಲಘುಟಕರ್ (51) ಹತ್ಯೆಗೀಡಾದವರು. ಏ.20ರಂದು ಇವರ ಎರಡನೇ ವಿವಾಹ ನಿಗದಿಯಾಗಿತ್ತು. ಇದಕ್ಕಾಗಿ ಮನೆಯಲ್ಲಿ ₹50 ಸಾವಿರ ನಗದು ಹಾಗೂ ₹10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಇಟ್ಟಿದ್ದರು. ಇವುಗಳ ಮೇಲೆ ಕಣ್ಣಿಟ್ಟಿದ್ದ ಪರಿಚಿತ ಮಂಜುನಾಥ ನಾಯ್ಕ, ಭಾನುವಾರ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ವೈದ್ಯರನ್ನು ಕೊಲೆಗೈದು ಪರಾರಿಯಾಗಿದ್ದ. ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದ ಕುಟುಂಬಸ್ಥರಿಗೆ ಕೊಲೆ ನಡೆದಿರುವುದು ತಿಳಿದಿತ್ತು.

ಡಿಎಸ್ಪಿ ಗೀತಾ ಪಾಟೀಲ ಹಾಗೂ ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪಿಎಸ್ಐ ಬಸವರಾಜ ಕನಶೆಟ್ಟಿ ಮತ್ತು ತಂಡವು ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಯನ್ನು ಬಂಧಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ನೆರವಿನೊಂದಿಗೆ ಕೇವಲ 6 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಚಿನ್ನಾಭರಣವನ್ನು ವಶಕ್ಕೆ ಪಡೆದ ತಂಡದ ಕಾರ್ಯವನ್ನು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ. ಬಂಧಿತನನ್ನು ಕೋರ್ಟ್ಗೆ ಹಾಜರುಪಡಿಸಿ ಜೈಲಿಗೆ ಕಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-42-1770577733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.