ಶಿರಸಿ: ‘ಮೇಲ್ದರ್ಜೆಗೆ ಏರಿದ ಶಿರಸಿ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ 107 ಹುದ್ದೆಗಳ ಪೈಕಿ ಕೇವಲ 37 ಹುದ್ದೆಗೆ ನೇಮಿಸುವ ಮೂಲಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೇವಲ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನಾಗಿಸಲು ಸಂಚು ರೂಪಿಸಲಾಗಿದೆ’ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜನರಿಗಾಗಿ ತಂದಿದ್ದ ₹142 ಕೋಟಿ ಯೋಜನೆಯ ಆಸ್ಪತ್ರೆಯ ಮೂಲ ಸ್ವರೂಪವನ್ನೇ ಬದಲಾಯಿಸಲಾಗುತ್ತಿದೆ. ಇದರ ಫಲ ಬಿಜೆಪಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ನವರು ಪಂಡಿತ ಸಾರ್ವಜನಿಕ ಆಸ್ಪತ್ರೆ ವಿಚಾರದಲ್ಲಿ ಸಾರ್ವಜನಿಕರಿಗೆ ದ್ರೋಹ ಎಸಗುತ್ತಿದ್ದಾರೆ. ಕ್ಷೇತ್ರದ ಬಡ ಜನತೆ ಈ ಮೋಸವನ್ನು ಎಂದಿಗೂ ಕ್ಷಮಿಸುವುದಿಲ್ಲ' ಎಂದರು.

'ಹಾಲಿ 90 ಸಿಬ್ಬಂದಿ ಇದ್ದು, ಹೆಚ್ಚುವರಿಯಾಗಿ 107 ಸಿಬ್ಬಂದಿ ಬೇಕಿದ್ದರೂ ಕೇವಲ 37 ಜನರನ್ನು ಮಾತ್ರ ನಿಯೋಜಿಸಲಾಗಿದೆ. ಇದರಲ್ಲಿ ಹೃದಯ, ನ್ಯೂರೋಲಾಜಿ ತಜ್ಞರಿಲ್ಲ. ಆರೋಗ್ಯ ಸಚಿವರು ಶಿರಸಿ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆ ಸ್ಥಾನಮಾನ ನೀಡುವುದಾಗಿ ಸುಳ್ಳು ಭರವಸೆ ನೀಡುತ್ತಾ ಜನರಿಗೆ ಟೋಪಿ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಈಗಾಗಲೇ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದು, ಆಸ್ಪತ್ರೆಯು ಮೂಲ ಮಂಜೂರಾತಿಯಂತೆಯೇ ಅನುಷ್ಠಾನಗೊಳ್ಳುವವರೆಗೆ ನಿರಂತರ ಹೋರಾಟ ನಡೆಸಲಾಗುವುದು' ಎಂದು ಎಚ್ಚರಿಸಿದರು.

'2020ರ ನವೆಂಬರ್ನಲ್ಲಿ ಕಾರ್ಡಿಯೋಲಾಜಿ, ನ್ಯೂರೋಲಾಜಿ ಸೇರಿದಂತೆ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳ ಆಸ್ಪತ್ರೆಗೆ ಅನುಮೋದನೆ ಸಿಕ್ಕಿತ್ತು. ಕಟ್ಟಡಕ್ಕೆ ₹112 ಕೋಟಿ ಹಾಗೂ ಉಪಕರಣಗಳಿಗೆ ₹30 ಕೋಟಿ ಮೀಸಲಿಡಲಾಗಿತ್ತು. ಕಟ್ಟಡದ ಶೇ 80ರಷ್ಟು ಕಾಮಗಾರಿ ಮುಗಿದ ತಕ್ಷಣ ಉಪಕರಣಗಳ ಟೆಂಡರ್ ಹಾಗೂ ಸಿಬ್ಬಂದಿ ನೇಮಕಾತಿ ಮಾಡಬೇಕೆಂಬ ನಿಯಮವಿದ್ದರೂ, ವರ್ಷ ಕಳೆದರೂ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಬದಲಾಗಿ, ಉಪಕರಣಗಳ ವೆಚ್ಚವನ್ನು ₹5.20 ಕೋಟಿಗೆ ಕಡಿತಗೊಳಿಸಿ, ಬಡವರಿಗೆ ಉಚಿತವಾಗಿ ಸಿಗಬೇಕಿದ್ದ ₹15 ಕೋಟಿ ಮೌಲ್ಯದ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್ ಯಂತ್ರಗಳನ್ನು ಮಾಯ ಮಾಡಲಾಗಿದೆ' ಎಂದು ಆರೋಪಿಸಿದರು.

ಪಕ್ಷದ ಪ್ರಮುಖರಾದ ಉಷಾ ಹೆಗಡೆ, ಆನಂದ ಸಾಲೇರ, ರಮೇಶ ನಾಯ್ಕ, ರಾಘವೇಂದ್ರ ನಾಯ್ಕ, ನಾಗರಾಜ ನಾಯ್ಕ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-20-1537297241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.