ಶಿರಸಿ: ನಗರದ ಸಿಂಪಿಗಲ್ಲಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಶಿರಸಿ ನಗರ ಠಾಣೆಯಲ್ಲಿ ಆರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೇ 21ರಂದು ದೇವಿಕೆರೆ ಬಳಿ ಸಂಭವಿಸಿದ ದ್ವಿಚಕ್ರ ವಾಹನ ಡಿಕ್ಕಿ ಘಟನೆಯ ವೈಷಮ್ಯವೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ. ಅಂದು ರಾತ್ರಿ ಸಿಂಪಿಗಲ್ಲಿಯಲ್ಲಿ ಮುಖಾಮುಖಿಯಾದ ಎರಡೂ ಗುಂಪಿನ ಯುವಕರು ಕ್ಷಣಾರ್ಧದಲ್ಲಿ ಕೈಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಲಾಟೆಯ ದೃಶ್ಯಾವಳಿಗಳು ಹಾಗೂ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿ, ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-20-1304897535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.