ಬೆಂಗಳೂರು: ‘ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಿರ್ಮಿಸಲಾಗುತ್ತಿರುವ 250 ಹಾಸಿಗೆಗಳ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಶಿರಸಿಯ ‘ಅನಂತಮೂರ್ತಿ ಹೆಗಡೆ ಚಾರಿಟಬಲ್ ಟ್ರಸ್ಟ್’ ಅಧ್ಯಕ್ಷ ಅನಂತ ಮೂರ್ತಿ ಹೆಗಡೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ನಿರ್ದೇಶಕ, ಮುಖ್ಯ ಎಂಜಿನಿಯರ್, ಉತ್ತರ ಕನ್ನಡ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪ್ರಭಾಕರ ಎಲ್.ಶೆಟ್ಟಿ ವಕಾಲತ್ತು ವಹಿಸಿದ್ದಾರೆ.

ಅರ್ಜಿಯಲ್ಲಿ ಏನಿದೆ?: ‘ಶಿರಸಿಯಲ್ಲಿರುವ 100 ಹಾಸಿಗೆಗಳ ಪಂಡಿತ್ ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಪರಿವರ್ತಿಸಲಾಗುವುದು. ಅದಕ್ಕಾಗಿ ₹26.8 ಕೋಟಿ ವ್ಯಯಿಸಲಾಗುವುದು. ಮೂರು ವರ್ಷಗಳಲ್ಲಿ ಈ ಯೊಜನೆ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ 2020-21ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿತ್ತು. ನಂತರ ಇದಕ್ಕಾಗಿ ಟೆಂಡರ್ ಅಂತಿಮಗೊಳಿಸಲಾಗಿತ್ತು. ಆದರೆ, ಐದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ವೈದ್ಯರು, ನರ್ಸ್, ಸಿಬ್ಬಂದಿಯನ್ನು ನಿಯೋಜಿಸಿಲ್ಲ ಹಾಗೂ ಜೀವ ಉಳಿಸುವ ವೈದ್ಯಕೀಯ ಉಪಕರಣಗಳನ್ನೂ ಖರೀದಿಸಿಲ್ಲ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಹೃದ್ರೋಗ ಹಾಗೂ ನರ ತಜ್ಞರು, ಶಸ್ತ್ರಚಿಕಿತ್ಸೆಯ ನುರಿತ ವೈದ್ಯರು ಇಲ್ಲ. ಇದರಿಂದ ಶಿರಸಿ, ಸಿದ್ದಾಪುರ, ಮುಂಡಗೋಡು ಮತ್ತು ಹಾನಗಲ್ ಪ್ರದೇಶಗಳಲ್ಲಿ ಹೃದಯಾಘಾತ, ಮೆದುಳಿಗೆ ಪೆಟ್ಟು ತಿಂದ ರೋಗಿಗಳನ್ನು ತುರ್ತು ಚಿಕಿತ್ಸೆಗಾಗಿ 125 ಕಿ.ಮೀ ದೂರದ ಹುಬ್ಬಳ್ಳಿ ಆಸ್ಪತ್ರೆಗೆ ಕರೆದೊಯ್ಯಬೇಕಿದೆ. ಹಲವು ರೋಗಿಗಳು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ ಸಂದರ್ಭಗಳಿವೆ’ ಎಂಬ ಅಂಶವನ್ನು ಕಾಣಿಸಲಾಗಿದೆ.

‘ಕಾಲಮಿತಿಯೊಳಗೆ ಪಂಡಿತ್ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪೂರ್ಣಗೊಳಿಸಬೇಕು. ಹೃದ್ರೋಗ ಹಾಗೂ ನರ ತಜ್ಞರೂ ಸೇರಿದಂತೆ ವೈದ್ಯರು, ನರ್ಸ್, ಸಿಬ್ಬಂದಿಯನ್ನು ನೇಮಿಸಬೇಕು. ಜೀವ ಉಳಿಸುವ ವೈದ್ಯಕೀಯ ಉಪಕರಣಗಳು, ಸಿಟಿ, ಎಂಆರ್ಐ ಸ್ಕ್ಯಾನ್ ಯಂತ್ರಗಳನ್ನು ಆಸ್ಪತ್ರೆಯಲ್ಲಿ ಅಳವಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-479288858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.