ಸಿದ್ದಾಪುರ: ‘ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಸ್ಪತ್ರೆಯಲ್ಲಿನ ಎಲ್ಲ ಸೌಲಭ್ಯ ಒದಗಿಸುವುದರ ಜೊತೆಗೆ ಸಮುದಾಯ ಆರೋಗ್ಯ ಕೇಂದ್ರದ ಮೇಲ್ದರ್ಜೆಗೇರಿದ ಜಿಲ್ಲೆಯ ನಾಲ್ಕು ಕೇಂದ್ರಗಳಿಗೆ ಶೀಘ್ರದಲ್ಲೇ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಭರವಸೆ ನೀಡಿದರು.

ತಾಲ್ಲೂಕಿನ ಕ್ಯಾದಗಿಯಲ್ಲಿ ₹9 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಕೇವಲ ಕಟ್ಟಡಗಳಿಂದ ಜನರಿಗೆ ಆರೋಗ್ಯ ಸಿಗಲು ಸಾಧ್ಯವಿಲ್ಲ. ಉತ್ತಮ ವೈದ್ಯರು ಮತ್ತು ಸಿಬ್ಬಂದಿ ವರ್ಗ ಇದ್ದಾಗ ಮಾತ್ರ ಅದು ಸಾಧ್ಯ. ಕಾಯಿಲೆಗಳು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ. ಇದಕ್ಕೆ ನಮ್ಮ ಜೀವನ ಶೈಲಿಯೂ ಮುಖ್ಯ ಕಾರಣ. ಆದರೆ ಹಳ್ಳಿಗಳಲ್ಲಿನ ಜನ ದೈಹಿಕ ಶ್ರಮ ವಹಿಸುವುದರಿಂದ ಆರೋಗ್ಯ ಕಾಪಾಡಿಕೊಳ್ಳುತ್ತಾರೆ. ರೋಗ ಉಲ್ಬಣಗೊಂಡ ನಂತರ ಚಿಕಿತ್ಸೆ ಪಡೆಯುವ ಬದಲು ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಲಾಗಿದೆ’ ಎಂದರು.

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ‘ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ಕೊಟ್ಟಿದೆ. ಹಲವಾರು ವರ್ಷಗಳ ಬೇಡಿಕೆಯಾದ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ’ ಎಂದರು.

ಆರೋಗ್ಯ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕಿ ಡಾ.ಪುಷ್ಪಾ, ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ರಾವ್, ತಹಶೀಲ್ದಾರ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಓ ದೇವರಾಜ ಹಿತ್ತಲಕೊಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ ನಾಯ್ಕ, ಕ್ಯಾದಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕುಸುಮಾ ಇದ್ದರು.

ರಜನಿ ಪ್ರಶಾಂತ ನಾಯ್ಕ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮಮತಾ ಕೊಡಿಯಾ ನಿರೂಪಿಸಿದರು.

ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಲು ಗ್ರಾಮೀಣ ಪ್ರದೇಶದಲ್ಲಿನ ಜನ ಆರೋಗ್ಯಯುತ ಜೀವನ ನಡೆಸುವುದು ಮಾದರಿಯಾಗಿದೆ
ದಿನೇಶ್ ಗುಂಡೂರಾವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ

ಕೆಎಫ್ಡಿ ಪ್ರಯೋಗಾಲಯಕ್ಕೆ ಅನುದಾನ

‘ಜಿಲ್ಲೆಯ ಮಲೆನಾಡು ಭಾಗದಲ್ಲಿನ ಮಂಗನ ಕಾಯಿಲೆ ತಪಾಸಣೆಗೋಸ್ಕರ ₹40 ಲಕ್ಷ ಅನುದಾನ ನೀಡಿ ಶಿರಸಿಯಲ್ಲಿ ಕೆಎಫ್ಡಿ ಪತ್ತೆ ಪ್ರಯೋಗಾಲಯ ತೆರೆಯಲು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸಹಕರಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ಕೈಗೆಟಕುತ್ತಿಲ್ಲ. ಸರ್ಕಾರ ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿದ್ದು ಜನಸಾಮಾನ್ಯರು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.