ಐವನ್ ಡಿಸೋಜಾ ಅವರು ಸಂವಿಧಾನ ಬಾಹಿರ ಹೇಳಿಕೆ ನೀಡಿದ್ದು, ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಇದರಿಂದ ಸಮಾಜದಲ್ಲಿ ಅಭದ್ರತೆ ಕಾಡುವಂತಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಿಪಿಐ ಶಶಿಕಾಂತ ವರ್ಮಾ ದೂರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮಕುಮಾರ್ ನಾಯ್ಕ, ಶಿರಸಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ, ನಗರ ಯುವ ಮೋರ್ಚಾ ಅಧ್ಯಕ್ಷ ವಿಜಯ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ಸುದರ್ಶನ ವೈದ್ಯ, ಸಾಮಾಜಿಕ ಜಾಲತಾಣದ ಸಂಚಾಲಕ ರವಿ ಶೆಟ್ಟಿ, ಎಸ್.ಟಿ. ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ್ ಬಳ್ಳಾರಿ, ಭೂಷಣ ಅನ್ವೇಕರ್, ಸಂಜಯ್ ಸಜ್ಜನ್, ನಿತಿನ್ ರಾಯ್ಕರ್, ರಾಜಾನಂದ ದೇಶಹಳ್ಳಿ ಇದ್ದರು.