ಶಿರಸಿ: ‘ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೀಡಿದ ಅರ್ಜಿಗಳ ಕುರಿತು ಯಾವುದೇ ಇಲಾಖೆ ಸರಿಯಾಗಿ ಸ್ಪಂದಿಸದಿರುವುದು ಖೇದಕರ. ಈ ಕೂಡಲೇ ಎಲ್ಲಾ ಬಾಕಿ ಅರ್ಜಿಗಳನ್ನು ಇತ್ಯರ್ಥಪಡಿಸಿ, ಮೇ 15ರೊಳಗೆ ತಹಶೀಲ್ದಾರರಿಗೆ ಸಮಗ್ರ ವರದಿ ಸಲ್ಲಿಸಬೇಕು’ ಎಂದು ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು.

ಸೋಮವಾರ ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಹೋಬಳಿ ಮಟ್ಟದ ಜನಸ್ಪಂದನದಲ್ಲಿ ಬಂದ 428 ಅರ್ಜಿಗಳ ಪೈಕಿ ಕೇವಲ 4 ಅರ್ಜಿಗಳು ಮಾತ್ರ ವಿಲೇವಾರಿ ಆಗಿರುವುದು ಸರಿಯಲ್ಲ. ಜನರು ವಿಶ್ವಾಸದಿಂದ ನೀಡಿದ ಅರ್ಜಿಗಳಿಗೆ ತಾರ್ಕಿಕ ಅಂತ್ಯ ಹಾಡದ ಅಧಿಕಾರಿಗಳ ಧೋರಣೆ ಖಂಡನೀಯ. ಮೇ 15ರೊಳಗೆ ತಹಶೀಲ್ದಾರರಿಗೆ ಸಮಗ್ರ ವರದಿ ಸಲ್ಲಿಕೆಯಾಗಬೇಕು. ಇಲ್ಲದಿದ್ದರೆ ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಅನಿವಾರ್ಯ’ ಎಂದರು.

‘ತಾಲ್ಲೂಕಿನ 32 ಮಳೆ ಮಾಪನ ಯಂತ್ರಗಳಲ್ಲಿ 16 ಯಂತ್ರಗಳು ಕೆಟ್ಟು ನಿಂತಿವೆ. ಇದರಿಂದಾಗಿ ಬೆಳೆ ವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ಒಂದು ವಾರದೊಳಗೆ ಈ ಕುರಿತು ಗ್ರಾಮ ಪಂಚಾಯಿತಿಗಳಿಂದ ತಹಶೀಲ್ದಾರ್ ಅವರಿಗೆ ವರದಿ ನೀಡಬೇಕು’ ಎಂದು ಸೂಚಿಸಿದ ಅವರು, ‘ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಯಂ ನೀರಿನ ಸಮಸ್ಯೆ ಇರುವ ಪ್ರದೇಶಗಳ ವರದಿ ಸಿದ್ಧಪಡಿಸಿ ಶಾಶ್ವತ ಪರಿಹಾರಕ್ಕೆ ಕ್ರಮವಹಿಸಬೇಕು’ ಎಂದು ಸೂಚಿಸಿದರು.

‘ಲ್ಯಾಂಡ್ ಆರ್ಮಿ, ನಿರ್ಮಿತಿ ಕೇಂದ್ರಗಳ ಕಾಮಗಾರಿಗಳಲ್ಲಿ ಮರಳಿನ ಬದಲು ಕಲ್ಲಿನ ದೂಳು ಬಳಸುತ್ತಿರುವ ಬಗ್ಗೆ ದೂರುಗಳಿದ್ದು, ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಎಚ್ಚರಿಸಿದರು. ನವೆಂಬರ್ ವೇಳೆಗೆ ಹೊಸ ಆಡಳಿತ ಸಂಕೀರ್ಣ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ತಹಶೀಲ್ದಾರ್ ಪಟ್ಟರಾಜ ಗೌಡ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಪಿ.ಸತೀಶ, ಇಒ ಚನ್ನಬಸಪ್ಪ ಹಾವಣಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-20-811782444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.