ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ | ಶಾಲೆ ಕಟ್ಟಡ ವೀಕ್ಷಣೆ: ತಾತ್ಕಾಲಿಕ ಪರಿಹಾರಕ್ಕೆ ಸೂಚನೆ

Published 22 ಜೂನ್ 2024, 13:49 IST
Last Updated 22 ಜೂನ್ 2024, 13:49 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಕುಳವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಗದ್ದೆ ಕಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಭೇಟಿ ನೀಡಿ, ಶಿಥಿಲಗೊಂಡಿರುವ ಶಾಲಾ ಕಟ್ಟಡವನ್ನು ವೀಕ್ಷಿಸಿದರು. 

ಇತ್ತೀಚಿನ ಮಳೆಗೆ ಶಾಲೆಯ ಒಂದು ಕಟ್ಟಡ ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿದೆ. ಇದರಿಂದ ಅಲ್ಲಿನ ಮಕ್ಕಳನ್ನು ಪಕ್ಕದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ಪರಿಹಾರ ನೀಡಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ತಮ್ಮ ಅನುದಾನದಲ್ಲಿ ಶಾಲೆಗೆ ಹೊಸ ಕಟ್ಟಡ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಶಾಲಾ ಅಭಿವೃದ್ಧಿ ಸಮಿತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. 

ಕುಳವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಜಿತಾ ಹೆಗಡೆ, ಸದಸ್ಯ ಸಂದೇಶ ಭಟ್ ಬೆಳಖಂಡ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಹೆಗಡೆ, ಗ್ರಾಮಸ್ಥರಾದ ರವಿ ಹೆಗಡೆ, ಭರತ್ ಹೆಗಡೆ, ನಾಗೇಶ ಹೆಗಡೆ, ಉಲ್ಲಾಸ್ ರಾಯ್ಕರ್ ಮತ್ತು ಶಾಲಾ ಶಿಕ್ಷಕರು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT