ಶಿರಸಿ: ಭಾರತೀಯ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ, ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಶಿರಸಿ ಘಟಕದ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಸೇಲ್ಸ್ ಪ್ರೊಮೋಶನ್ ಉದ್ಯೋಗಿಗಳ ರಕ್ಷಣಾ ಕಾಯ್ದೆ-1976 ಅನ್ನು ಸಂರಕ್ಷಿಸಬೇಕು, ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಈ ಕ್ಷೇತ್ರದಲ್ಲಿನ ಉದ್ಯೋಗಿಗಳು ಎದುರಿಸುತ್ತಿರುವ ತುರ್ತು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಈ ವೇಳೆ ಆಗ್ರಹಿಸಿದರು.

ಶಿರಸಿ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಘಟಕದ ಅಧ್ಯಕ್ಷ ಸಂತೋಷ ನವಿಲಗೋಣ, ಖಜಾಂಚಿ ವಿನಾಯಕ ನಾಯ್ಕ, ಹಿರಿಯ ಸದಸ್ಯರಾದ ಮಧುಕರ ಹಳಕಾರ, ರಾಮಕೃಷ್ಣ ಹೆಗಡೆ ಹಾಗೂ ಕಾರ್ಯಕಾರಿಣಿ ಸದಸ್ಯರಾದ ಅರುಣ ಕೊಪ್ಪ, ಕೃಷ್ಣಮೂರ್ತಿ ಮತ್ತು ಆನಂದಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.