ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJPಯ ಉತ್ಸಾಹ ನೋಡಿ ಕಾಂಗ್ರೆಸ್ಸಿಗರು ಶಸ್ತ್ರ ತ್ಯಜಿಸಿದ್ದಾರೆ: ಅನಂತಕುಮಾರ ಹೆಗಡೆ

Published 15 ಫೆಬ್ರುವರಿ 2024, 16:11 IST
Last Updated 15 ಫೆಬ್ರುವರಿ 2024, 16:11 IST
ಅಕ್ಷರ ಗಾತ್ರ

ಶಿರಸಿ: ‘ಕಾಂಗ್ರೆಸ್ ಪಕ್ಷದವರು ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಾಗಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. 

ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ. ನಾವು ಇಲ್ಲದೇ ಹೋದಲ್ಲಿ ಜಗತ್ತನಲ್ಲಿ ನೆಮ್ಮದಿ ಇಲ್ಲ. ಹಿಂದುತ್ವವು ನಮ್ಮ ದೇಶದ ಉಸಿರಾಗಿದೆ. ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ. ಇಂಥ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಾಗಿದೆ’ ಎಂದು ತಿಳಿಸಿದರು.  

‘ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಪ್ರಚಾರಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಸಾಮಾಜಿಕ, ಸಾಂಸ್ಕೃತಿಕವಾಗಿ ಎಲ್ಲ ದೃಷ್ಟಿಯಿಂದ ಅಭಿವೃದ್ಧಿ ಹೊಂದಿದಾಗ ಮಾತ್ರ ಸಂಪೂರ್ಣ ಅಭಿವೃದ್ಧಿ ಆದಂತೆ ಎಂದರು. 

ಸಿ/ಎಂ ಸಿದ್ದರಾಮಯ್ಯನವರ ಕುರಿತು ಹೇಳಿದ ಏಕವಚನ ವಿಷಯ ಪ್ರಸ್ತಾಪಿಸಿದ ಅವರು,  ‘ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದಲ್ಲಿ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ, ಅಜ್ಜ, ಮಾಮಾ ಎಂದು ಕರೆಯಲು ಸಾಧ್ಯವೇ? ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಮಾಡಿದ್ದೇ. ಅಲ್ಲಿ ಶಾಸ್ತ್ರೀಯ ಸಂಗೀತ ಬಳಸಲು ಸಾಧ್ಯವಿಲ್ಲ’ ಎಂದು ಹೇಳಿದರು.‌

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದ್ರು ಎಸಳೆ ಮಾತನಾಡಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮ್ ಕುಮಾರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ನಾಯ್ಕ, ರಾಜ್ಯ ರೈತ ಮೋರ್ಚಾ ಸದಸ್ಯ ಗಣೇಶ ಸಣ್ಣಲಿಂಗಣ್ಣನವರ, ಶಿರಸಿ ಗ್ರಾಮೀಣ ಮಂಡಲ ಉಪಾಧ್ಯಕ್ಷ ಅರವಿಂದ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಸಿದ್ದು ಟೆಂಪೋ, ಬನವಾಸಿ ಶಕ್ತಿಕೇಂದ್ರದ ಅಧ್ಯಕ್ಷ ಸಿದ್ದವೀರೇಶ ನೆರಗಲ್, ಹಿರಿಯರಾದ ಟಿ.ಜಿ.ನಾಡಿಗೇರ, ಮೃತ್ಯುಂಜಯ ಚೌದರಿ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT