ಶಿರಸಿ: ನಗರದ ಹೊಸಪೇಟೆ ರಸ್ತೆಯ ವೆಲ್ ನೆಸ್ಟ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್, ಪ್ರಗತಿ ಮಿತ್ರ ಚಾರಿಟೇಬಲ್ ಟ್ರಸ್ಟ್ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಪೌರಾಯುಕ್ತ ಪ್ರಕಾಶ ಚನ್ನಪ್ಪನವರ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಸ್ತ್ರಚಿಕಿತ್ಸಕ ಡಾ. ರೋಹಿತ ಹೆಗಡೆ ಅವರು, ಪೌರ ಕಾರ್ಮಿಕರು ವೃತ್ತಿಪರ ಕೆಲಸದ ಅವಧಿಯಲ್ಲಿ ಎದುರಿಸಬಹುದಾದ ಆರೋಗ್ಯ ಸಮಸ್ಯೆಗಳು ಹಾಗೂ ಅವುಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಶಿಬಿರದಲ್ಲಿ ನೂರಕ್ಕೂ ಹೆಚ್ಚು ಪೌರ ಕಾರ್ಮಿಕರು ಪಾಲ್ಗೊಂಡು ತಪಾಸಣೆಗೊಳಪಟ್ಟರು. ನಾಡಿ ಮಿಡಿತ, ರಕ್ತದೊತ್ತಡ, ಹಿಮೋಗ್ಲೋಬಿನ್ ಹಾಗೂ ಮಧುಮೇಹದಂತಹ ಪ್ರಾಥಮಿಕ ಪರೀಕ್ಷೆಗಳ ಜತೆಗೆ ಸಾಮಾನ್ಯ ರೋಗ, ಹೃದ್ರೋಗ, ಕೀಲು ಮತ್ತು ಮೂಳೆ ರೋಗ, ಸ್ತ್ರೀ ರೋಗ, ಮೂತ್ರ ರೋಗ ಹಾಗೂ ಕಣ್ಣಿನ ತೊಂದರೆಗಳ ಬಗ್ಗೆಯೂ ತಜ್ಞ ವೈದ್ಯರು ಸೂಕ್ತ ತಪಾಸಣೆ ನಡೆಸಿ ಸಲಹೆ ನೀಡಿದರು.

ವೇದಿಕೆಯಲ್ಲಿ ನಗರಸಭೆಯ ಶಿವರಾಜ, ಮಧುಕೇಶ್ವರ, ಮನುವಿಕಾಸ ಸಂಸ್ಥೆಯ ಗಣಪತಿ ಭಟ್, ವೆಲ್ ನೆಸ್ಟ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಮಂಜುನಾಥ ಹಾಗೂ ಅಧೀಕ್ಷಕ ಡಾ. ಮಧುಕೇಶ್ವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-20-159777816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.