ಶಿರಸಿ: ಕೂಲಿ ಹಣದ ವಿಚಾರಕ್ಕಾಗಿ ನಡೆದ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಜಿಲ್ಲಾ ಕೋರ್ಟ್, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಜಿಲ್ಲಾ ನ್ಯಾಯಾಧೀಶ ಕಿರಣ ಕಿಣಿ ಅವರು ಈ ಆದೇಶ ಹೊರಡಿಸಿದ್ದಾರೆ.

ತಾಲ್ಲೂಕಿನ ಕಮಟಗೇರಿಯ ನಿವಾಸಿ ಮಂಜುನಾಥ ಚನ್ನಯ್ಯ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದು, ಇದೇ ಗ್ರಾಮದ ರವೀಶ ಚೆನ್ನಯ್ಯ ಕೊಲೆಯಾದ ವ್ಯಕ್ತಿ. 2025ರ ಆ.14ರಂದು ರಾತ್ರಿ ನಡೆದಿದ್ದ ಘಟನೆಯಲ್ಲಿ, ಕೂಲಿ ಹಣ ₹500 ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಮಂಜುನಾಥನು ರವೀಶನಿಗೆ ಕಬ್ಬಿಣದ ಸಲಾಕೆಯಿಂದ ಬಲವಾಗಿ ಹೊಡೆದಿದ್ದನು. ತೀವ್ರವಾಗಿ ಗಾಯಗೊಂಡ ರವೀಶ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಅಂದಿನ ಗ್ರಾಮೀಣ ಠಾಣೆ ಸಿಪಿಐ ಹಾಗೂ ಪ್ರಸ್ತುತ ಶಿರಸಿ ವಿಭಾಗದ ಸಿಪಿಐ ಆಗಿರುವ ಶಶಿಕಾಂತ ವರ್ಮಾ ತನಿಖೆ ನಡೆಸಿ, ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕ ರಾಜೇಶ ಮಳಗಿಕರ ಮಂಡಿಸಿದ ವಾದ ಪುರಸ್ಕರಿಸಿದ ಕೋರ್ಟ್ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.

ಅಲ್ಲದೆ, ದಂಡದ ಮೊತ್ತದ ಜತೆಗೆ ಮೃತನ ಪತ್ನಿಗೆ ₹50 ಸಾವಿರ ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-20-1813787787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.