ಶಿರಸಿ: 'ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡುವಲ್ಲಿ ನೀರು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ' ಎಂದು ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆಯ ಸಿ.ಎಸ್.ಆರ್. ವಿಭಾಗದ ಡೆಪ್ಯೂಟಿ ಮ್ಯಾನೇಜರ್ ಮುತ್ತರಾಜ ಹೇಳಿದರು.

ಇಲ್ಲಿನ ಸಾಲ್ಕಣಿ ಲಕ್ಷ್ಮೀನರಸಿಂಹ ಪ್ರೌಢಶಾಲೆ, ಗಣೇಶ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಭೂಮಾ ಪ್ರೌಢಶಾಲೆಗಳಲ್ಲಿ ನಾರಾಯಣ ಹೆಲ್ತ್ ಮತ್ತು ಸ್ಕೊಡ್ವೆಸ್ ಸಂಸ್ಥೆಯ ಜಂಟಿ ಸಹಯೋಗದಲ್ಲಿ ನೂತನವಾಗಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಲ್ಲಿ ನೀರಿನಿಂದ ಹರಡುವ ವಿವಿಧ ಕಾಯಿಲೆಗಳನ್ನು ತಡೆಯುವುದು, ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವುದು ಹಾಗೂ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಮಹತ್ತರ ಉದ್ದೇಶದಿಂದ ಈ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಅತ್ಯಂತ ಉತ್ಕೃಷ್ಟ ಗುಣಮಟ್ಟದ ಈ ಘಟಕಗಳನ್ನು ಸರಿಯಾಗಿ ನಿರ್ವಹಿಸುವ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರತಿನಿತ್ಯ ಅವಶ್ಯವಿರುವ ಶುದ್ಧ ನೀರು ನಿರಂತರವಾಗಿ ಸಿಗುವಂತಾಗಲಿ’ ಎಂದು ಹೇಳಿದರು.

ಸ್ಕೊಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಮಾತನಾಡಿ, ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದರೂ ಸಹ, ಹಲವಾರು ಭಾಗಗಳಲ್ಲಿ ಬೇಸಿಗೆಯ ಅವಧಿಯಲ್ಲಿ ತೀವ್ರ ನೀರಿನ ಅಭಾವ ಎದುರಿಸಬೇಕಾದ ಕಠಿಣ ಸಂದರ್ಭ ನಿರ್ಮಾಣವಾಗುತ್ತದೆ. ಜಿಲ್ಲೆಯ ಹಲವಾರು ಶಾಲೆಗಳಲ್ಲೂ ನೀರಿನ ಅಭಾವದ ಕಾರಣದಿಂದಾಗಿ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೂ ತೊಂದರೆ ಎದುರಿಸುವ ಪರಿಸ್ಥಿತಿ ಇದೆ. ಅದರಲ್ಲೂ ಮುಖ್ಯವಾಗಿ ಶುದ್ಧ ನೀರಿನ ಕೊರತೆಯಿಂದಾಗಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿ ಶಾಲೆಗೆ ಗೈರು ಹಾಜರಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಗಂಭೀರ ಹಿನ್ನೆಲೆಯನ್ನು ಪರಿಗಣಿಸಿ ಶಾಲೆಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಆದ್ಯತೆಯ ಮೇರೆಗೆ ಅಳವಡಿಸಲಾಗುತ್ತಿದೆ’ ಎಂದು ಹೇಳಿದರು.

ಶಿವಮೊಗ್ಗ ನಾರಾಯಣ ಹೆಲ್ತ್ ಸಂಸ್ಥೆಯ ಸೀನಿಯರ್ ಎಕ್ಸಿಕ್ಯೂಟಿವ್ ಆಕಾಶ ಕೆ.ಸಿ., ಸ್ಕೊಡ್ವೆಸ್ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ, ಯೋಜನಾ ವಿಭಾಗದ ಮುಖ್ಯಸ್ಥ ವೀರೇಂದ್ರ ಸಿ, ಸಾಲ್ಕಣಿ ಶಾಲೆಯ ಮುಖ್ಯಶಿಕ್ಷಕ ಪ್ರಶಾಂತ ಭಟ್, ಗಣೇಶ ನಗರ ಶಾಲೆ ಮುಖ್ಯಶಿಕ್ಷಕ ತೇಲು ಬೋರಕರ, ಶಾಲಾ ಶಿಕ್ಷಕ ಮೋಹನ ನಾಯ್ಕ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-421876347

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.