ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಧ್ಯಮ ಶ್ರೀ ಪ್ರಶಸ್ತಿಗೆ ಬೆಟ್ಟಕೊಪ್ಪ ಆಯ್ಕೆ

Published 9 ಜುಲೈ 2024, 12:19 IST
Last Updated 9 ಜುಲೈ 2024, 12:19 IST
ಅಕ್ಷರ ಗಾತ್ರ

ಶಿರಸಿ: ಕಾರ್ಯನಿರತ ಪತ್ರಕರ್ತರ ಸಂಘದ ಶಿರಸಿ ತಾಲ್ಲೂಕು ಘಟಕವು ಪ್ರತಿ ವರ್ಷವೂ ನೀಡುವ ಮಾಧ್ಯಮ ಶ್ರೀ ಪ್ರಶಸ್ತಿಗೆ ಇಲ್ಲಿನ ಪತ್ರಕರ್ತ ರಾಘವೇಂದ್ರ ಬೆಟ್ಟಕೊಪ್ಪ ಆಯ್ಕೆ ಆಗಿದ್ದಾರೆ.

ಜಿಲ್ಲಾ ಪತ್ರಿಕಾ ಭವನದಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರನ್ನು ಒಕ್ಕೊರಲಿನಿಂದ ಆಯ್ಕೆ ಮಾಡಲಾಯಿತು.

23 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿರುವ ಬೆಟ್ಟಕೊಪ್ಪ, ಸಾಂಸ್ಕೃತಿಕ, ಸಾಹಿತ್ಯ, ಕೃಷಿ, ಗ್ರಾಮೀಣಾಭಿವೃದ್ದಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಈಗಾಗಲೇ ಮೂರು ಕೃತಿಗಳನ್ನೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ. ಇವರ ಬರಹಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ‌ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ನುಡಿಚಿತ್ರ ಪ್ರಶಸ್ತಿ, ಜಿಲ್ಲಾ ಪತ್ರಿಕಾ ಸಂಘವು ಜಿ.ಎಸ್.ಹೆಗಡೆ ಅಜ್ಜೀಬಳ ಹೆಗಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಪ್ರಕಟನಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT