ಶಿರಸಿ: ನಗರದ ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಗುರುವಾರ ಮತ್ತು ಶುಕ್ರವಾರ ಯಶಸ್ವಿಯಾಗಿ ನೆರವೇರಿದವು.

ಮಠದ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ದೂರದೃಷ್ಟಿಯ ಚಿಂತನೆ ಹಾಗೂ ವಿದ್ವಾನ್ ಕುಮಾರ ಭಟ್ ಕೊಳಗಿಬೀಸ್ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗಿತ್ತು. ಶುಕ್ರವಾರದಂದು ಗುರುರಾಯರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಲಾದ ಸುಂದರ ಆಲಯದಲ್ಲಿ ಶಾಸ್ತ್ರೋಕ್ತವಾಗಿ ನಾಗಪ್ರತಿಷ್ಠೆಯನ್ನು ನೆರವೇರಿಸಲಾಯಿತು.

ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಬಾವಿಯಲ್ಲಿ ಗಂಗಾಪೂಜೆ ಸಲ್ಲಿಸಿ, ಆ ಪವಿತ್ರ ಜಲದಿಂದ ಗುರುರಾಯರಿಗೆ ಕುಂಭಾಭಿಷೇಕವನ್ನು ನೆರವೇರಿಸಲಾಯಿತು. ನಂತರ ನೂತನ ಶಿಲಾಮಯ ತುಳಸಿ ಬೃಂದಾವನದ ಪ್ರತಿಷ್ಠಾಪನಾ ಕಾರ್ಯಗಳು ಮಂತ್ರಘೋಷಗಳೊಂದಿಗೆ ಸಂಪನ್ನಗೊಂಡವು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಅತ್ಯಂತ ಕಲಾತ್ಮಕವಾಗಿ ಕೆತ್ತನೆಗೊಳಿಸಲಾದ ಭವ್ಯ ಮುಖಮಂಟಪವನ್ನು ರಾಯರ ಮೂಲ ಮೃತಿಕಾ ಬೃಂದಾವನಕ್ಕೆ ಸಮರ್ಪಿಸಲಾಯಿತು. ನಂತರ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಅಸಂಖ್ಯ ಭಕ್ತರು ಪಾಲ್ಗೊಂಡಿದ್ದರು.

ರಾಘವೇಂದ್ರ ಸೇವಾ ಸಮಿತಿಯ ಈಶ್ವರ ಹೆಗಡೆ, ಕೆ.ವಿ.ಹೆಗಡೆ, ನವೀನ ಶೆಟ್ಟಿ, ಗುರುನಾಥ ಮಾಡಗೇರಿ ಇದ್ದರು. ಸಾವಿರಾರು ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-976161342

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.