ಶಿರಸಿ: ತಾಲ್ಲೂಕಿನಾದ್ಯಂತ ಶನಿವಾರ ನಡುರಾತ್ರಿ ಸುರಿದ ಅಬ್ಬರದ ಗಾಳಿ ಮಳೆಗೆ ವಿವಿಧೆಡೆ ಹಾನಿ ಸಂಭವಿಸಿದೆ.

ನಗರದ ಗಣೇಶನಗರದ ಎರಡನೇ ವಾರ್ಡಿನಲ್ಲಿ ಸೂಕ್ತ ಗಟಾರ ವ್ಯವಸ್ಥೆ ಇಲ್ಲದ ಕಾರಣ ಇಡೀ ರಸ್ತೆಯೇ ಸಂಪೂರ್ಣ ಕೊಚ್ಚಿಹೋಗಿದೆ. ಕಳೆದೆರಡು ತಿಂಗಳ ಹಿಂದಷ್ಟೇ ಇಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ರಸ್ತೆ ಮೇಲೆ ಮಣ್ಣು ಹಾಕಲಾಗಿತ್ತು. ಆದರೆ, ಕಾಮಗಾರಿ ವ್ಯವಸ್ಥಿತವಾಗಿ ಆಗದ ಕಾರಣ ಈ ಅವಾಂತರ ಸೃಷ್ಟಿಯಾಗಿದೆ ಎಂದು ಸ್ಥಳೀಯ ನಿವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಕುಸಿತದ ತೀವ್ರತೆಗೆ ನಿಲ್ಲಿಸಲಾಗಿದ್ದ ಒಮಿನಿ ಕಾರೊಂದು ಮಣ್ಣಿನಲ್ಲಿ ಹೂತುಹೋಗಿದ್ದು, ನಿವಾಸಿಗಳು ಮನೆಯಿಂದ ಹೊರಬರಲಾರದೇ ತೀವ್ರ ಪೇಚಾಟಕ್ಕೆ ಸಿಲುಕಿದ್ದರು. ಕುಸಿದಿರುವ ತಡೆಗೋಡೆಯು ಪಕ್ಕದ ಮನೆಗಳ ಮೇಲೆ ಬೀಳುವ ಆತಂಕ ಎದುರಾಗಿದ್ದು, ಸುಮಾರು ಎಂಟಕ್ಕೂ ಹೆಚ್ಚು ಕುಟುಂಬಗಳು ಅಪಾಯದ ನೆರಳಿನಲ್ಲಿ ರಾತ್ರಿ ಕಳೆಯುವಂತಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗ್ರಾಮೀಣ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದರಿಂದ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಿದೆ. ಮತ್ತೊಂದೆಡೆ, ಹಾವೇರಿ-ಶಿರಸಿ ರಸ್ತೆ ಕಾಮಗಾರಿ ಅರೆಬರೆಯಾಗಿರುವುದರಿಂದ ವಾಹನ ಸವಾರರ ಪಾಲಿಗೆ ಈ ಮಾರ್ಗ ಮೃತ್ಯುಕೂಪವಾಗಿ ಪರಿಣಮಿಸಿದೆ. ರಸ್ತೆಯ ಒಂದು ಬದಿ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮತ್ತೊಂದು ಕಡೆ ಮಳೆ ನೀರು ನಿಂತು ಕೆರೆಯಂತಾಗಿದ್ದರಿಂದ ಸಂಚಾರಕ್ಕೆ ಭಾರೀ ಸಂಕಷ್ಟ ಎದುರಾಗಿದೆ. ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಒಣಗುತ್ತಿದ್ದ ಜಲಮೂಲಗಳಲ್ಲಿ ನೀರಿನ ಹರಿವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಭಾನುವಾರ ಮಳೆ ಸಂಪೂರ್ಣ ಬಿಡುವು ನೀಡಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-20-727439280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.