ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ: ನ.7ರಂದು ಬೆಂಗಳೂರು ಚಲೋ

ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಆಗ್ರಹ
Published : 1 ಅಕ್ಟೋಬರ್ 2024, 12:26 IST
Last Updated : 1 ಅಕ್ಟೋಬರ್ 2024, 12:26 IST
ಫಾಲೋ ಮಾಡಿ
Comments

ಶಿರಸಿ: ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುವ ಹಿನ್ನಲೆಯಲ್ಲಿ ರಾಜ್ಯಾದಂತ ಅರಣ್ಯವಾಸಿಗಳು ನ.7ರಂದು ಬೆಂಗಳೂರು ಚಲೋ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು. 

ಇಲ್ಲಿನ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಮಂಗಳವಾರ ಪ್ರಮುಖ ಮುಖಂಡರಿಗೆ ಗ್ರೀನ್ ಕಾರ್ಡ್ ವಿತರಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಈಗಾಗಲೇ ಕರಡು ಕಸ್ತೂರಿರಂಗನ್ ವರದಿ ತಿರಸ್ಕರಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅಂತಿಮ ವರದಿ ಅನುಷ್ಠಾನ ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಾಗಿದ್ದು, ರಾಜ್ಯಾದಂತ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಹಿನ್ನಲೆಯಲ್ಲಿ ಹಾಗೂ ಅರಣ್ಯವಾಸಿಗಳ ಭೂಮಿ ಹಕ್ಕು ಆಗ್ರಹಿಸಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಹೋರಾಟ ಸಮಿತಿಯ ರಾಜ್ಯ ಸಂಚಾಲಕಿ ರಂಜಿತಾ ರವೀಂದ್ರ, ಜಿಲ್ಲಾ ಸಂಚಾಲಕ ನೆಹರು ನಾಯ್ಕ ಬಿಳೂರು, ನಾಗರಾಜ ದೇವಸ್ಥಳ ಅಚನಳ್ಳಿ, ರಾಜು ನರೇಬೈಲ್, ಇಬ್ರಾಹಿಂ ಗೌಡಳ್ಳಿ, ಎಂ.ಆರ್.ನಾಯ್ಕ ಕಂಡ್ರಾಜಿ, ಶಿವನಂದಾ ಪೂಜಾರಿ ಜಡ್ಡಿಗದ್ದೆ, ಗಂಗೂ ಬಾಯಿ ರಜಪೂತ, ಕಮಲಾ ಬಾಯಿ ಸಂಗೂ, ಸಾವಿತ್ರಿ ಎಳಿಗೇರ್, ನಜೀರ ಶೇಖ, ಸಪ್ರೀಂ ಶೇಖ, ರಾಜು ಗೌಡ ಅಲಕೋಡ ಮುಂತಾದವರು ಮಾತನಾಡಿದರು.

ಕಿರಣ ಮರಾಠಿ ದೇವನಳ್ಳಿ ಸ್ವಾಗತಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT