ಶಿರಸಿ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹4.50 ಕೋಟಿ ವೆಚ್ಚದ 19 ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಗುರುವಾರ ಚಾಲನೆ ನೀಡಿದರು.

2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಹುಣಸೆಕೊಪ್ಪ, ಇಟಗುಳಿ, ಹುಲೇಕಲ್, ಸಾಲ್ಕಣಿ, ಸೋಂದಾ, ಇಸಳೂರು ಸೇರಿದಂತೆ ವಿವಿಧ ಭಾಗಗಳ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ನೂರಾರು ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ’ ಎಂದರು.

‘ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಯು ಜಿಲ್ಲೆಯ ಪರಿಸರಕ್ಕೆ ಮಾರಕವಾಗಿದ್ದು, ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಪಕ್ಷಾತೀತವಾಗಿ ಬೃಹತ್ ಹೋರಾಟ ನಡೆಸಲಾಗಿದೆ. ಈಗಾಗಲೇ ಅಧಿವೇಶನದಲ್ಲಿಯೂ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಲಾಗಿದೆ’ ಎಂದು ತಿಳಿಸಿದರು.

‘ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕೈಗಾ, ಸೀಬರ್ಡ್, ಅಣೆಕಟ್ಟು ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಿಗಾಗಿ ಅಪಾರ ಭೂಮಿ ತ್ಯಾಗ ಮಾಡಿದೆ. ಕೇವಲ ಶೇ 18ರಷ್ಟು ಮಾತ್ರ ಕಂದಾಯ ಭೂಮಿ ಹೊಂದಿರುವ ಜಿಲ್ಲೆಯಲ್ಲಿ ಇಂತಹ ಬೃಹತ್ ಯೋಜನೆಗಳು ಜನರನ್ನು ಅತಂತ್ರಗೊಳಿಸುತ್ತವೆ. ಭೂಕುಸಿತದಂತಹ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಇಂತಹ ಅಪಾಯಕಾರಿ ಯೋಜನೆಗಳು ಬೇಡ ಎಂದು ಸರ್ಕಾರಕ್ಕೆ ನಿಯೋಗದ ಮೂಲಕ ಮನವಿ ಮಾಡಲಾಗಿದೆ’ ಎಂದರು.

‘ಲೋಕೋಪಯೋಗಿ ಇಲಾಖೆ ಯಿಂದ ರಸ್ತೆ ಕಾಮಗಾರಿಗಳಿಗೆ ₹30 ಕೋಟಿ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಗೆ ₹16 ಕೋಟಿ ಅನುದಾನ ಬಂದಿದೆ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ಶ್ರಮಿಕ ಶಾಲೆ ಮಂಜೂರು ಮಾಡಿದ್ದು, ಅದಕ್ಕೆ ಬೇಕಾದ ಜಾಗವನ್ನೂ ಗುರುತಿಸಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಅನುದಾನ ತಂದು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು’ ಎಂದು ಭರವಸೆ ನೀಡಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-20-1749293290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.