ಶಿರಸಿ: ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಮೃತಪಟ್ಟು, ಒಬ್ಬ ಗಂಭೀರ ಗಾಯಗೊಂಡ ಘಟನೆ ತಾಲ್ಲೂಕಿನ ಬಂಡಲದಲ್ಲಿ ಶುಕ್ರವಾರ ನಡೆದಿದೆ.

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ತಮಿಳುನಾಡು ಮೂಲದವರೆಂದು ಪೊಲೀಸರು ತಿಳಿಸಿದ್ದಾರೆ. ಮೃತರ ಹೆಸರು ಇನ್ನಷ್ಟೇ ತಿಳಿಯಬೇಕಿದೆ. ಬಸ್ಸಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.