ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದಾಪುರ | ಮಂಗನ ಕಾಯಿಲೆ: ಮೂವರ ಸಾವು

Published 4 ಮಾರ್ಚ್ 2024, 18:32 IST
Last Updated 4 ಮಾರ್ಚ್ 2024, 18:32 IST
ಅಕ್ಷರ ಗಾತ್ರ

ಸಿದ್ದಾಪುರ: ಮಂಗನ ಕಾಯಿಲೆಗೆ (ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಇಬ್ಬರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

‘ಸಿದ್ದಾಪುರ ತಾಲ್ಲೂಕು ಕಲ್ಲೂರಿನ 65 ವರ್ಷದ ವ್ಯಕ್ತಿ ಮತ್ತು ಹೆಗ್ಗೆಕೊಪ್ಪದ 80 ವರ್ಷದ ವೃದ್ಧ ಇಬ್ಬರಿಗೂ ಮಣಿಪಾಲ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ, ಕಾಯಿಲೆ ಇರುವುದು ದೃಢಪಟ್ಟಿತ್ತು. ಇಬ್ಬರೂ ಮೃತಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ಕೊಪ್ಪ ತಾಲ್ಲೂಕಿನಲ್ಲಿ ಸೋಮವಾರ ಮತ್ತೆ ಇಬ್ಬರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೆಎಫ್‌ಡಿ ಪ್ರಕರಣ 51ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಮೇಲ್‌ಪಾಲ್ ಗ್ರಾಮದ ಬಸವ ಪೂಜಾರಿ (71) ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆ ದೃಢವಾದ ಬಳಿಕ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT