ಶಿರಸಿ: 'ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳು ಜೀವವೈವಿಧ್ಯಕ್ಕೆ ಮಾರಕವಾಗಿದ್ದು ಇದನ್ನು ಕೇಂದ್ರ, ರಾಜ್ಯ ಸರ್ಕಾರಗಳು ತಕ್ಷಣವೇ ಕೈಬಿಡಬೇಕು’ ಎಂದು ಒತ್ತಾಯಿಸಿ ಶಿರಸಿಯ ಎಂಇಎಸ್ ಕಾಲೇಜು ಮೈದಾನದಲ್ಲಿ ಜನವರಿ 11ರಂದು ಜನ ಸಮಾವೇಶ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು, ‘ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಮೂಲಕ ಬೃಹತ್ ಹೋರಾಟಕ್ಕೆ ಚಾಲನೆ ನೀಡಲಾಗುವುದು’ ಎಂದರು.

‘ಕುಡಿಯುವ ನೀರು ಮತ್ತು ಕೃಷಿ ನೀರಾವರಿ ನೆಪವೊಡ್ಡಿ ನದಿ ಜೋಡಣೆ ವಿಸ್ತ್ರತ ಯೋಜನಾ ವರದಿ ರೂಪಿಸಲು ಸರ್ಕಾರಗಳು ಮುಂದಾಗಿವೆ. ಆದರೆ, ಈ ಯೋಜನೆಯಲ್ಲಿ ಮೂರು ಜಲಾಶಯಗಳು, ಕಿಲೋಮೀಟರ್ಗಟ್ಟಲೆ ಉದ್ದದ ಸುರಂಗ ಮಾರ್ಗ ಮತ್ತು ಕಾಲುವೆಗಳ ನಿರ್ಮಾಣವು ಸೇರಿದೆ. ಇದು ಜಾರಿಯಾದಲ್ಲಿ ಲಕ್ಷಾಂತರ ಎಕರೆ ವಿಸ್ತೀರ್ಣದ ದಟ್ಟ ಅರಣ್ಯ ಮತ್ತು ಪರಿಸರ ನಾಶವಾಗುವುದು ನಿಶ್ಚಿತ’ ಎಂದು ಸೋಮವಾರ ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.