ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಎಸ್‌ಎಸ್‌ನಲ್ಲಿ ಅವ್ಯವಹಾರ: ಶೀಘ್ರ ತನಿಖೆಗೆ ಒತ್ತಾಯ

Published 14 ಜೂನ್ 2024, 12:58 IST
Last Updated 14 ಜೂನ್ 2024, 12:58 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ತೋಟಗಾರ್ಸ್ ಕೋ ಆಪರೇಟಿವ್ ಸೇಲ್ ಸೊಸೈಟಿ (ಟಿ.ಎಸ್ಎಸ್)ನಲ್ಲಿ ನಡೆದಿದೆ ಎನ್ನಲಾದ ಅವ್ಯಹಾರಗಳಲ್ಲಿ ಭಾಗಿಯಾದವರ ಮೇಲೆ ನಗರದ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ 6 ಪ್ರಕರಣ ದಾಖಲಿಸಲಾಗಿದ್ದು, ಶೀಘ್ರ ತನಿಖೆ ಆರಂಭಿಸಲು ಸೂಚಿಸುವಂತೆ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಅವರು ಡಿಎಸ್‍ಪಿ ಗಣೇಶ ಕೆ.ಎಲ್  ಅವರಿಗೆ ಶುಕ್ರವಾರ ಮನವಿ ನೀಡಿದರು. 

‘ಹಿಂದಿನ ಆಡಳಿತ ಮಂಡಳಿ ಅಧಿಕಾರ ಅವಧಿಯಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕರಾಗಿದ್ದ ರವೀಶ ಹೆಗಡೆ ಹಾಗೂ ಇತರರು ಕರ್ನಾಟಕ ಸಹಕಾರ ಸಂಘಗಳ ಕಾಯಿದೆ ಕಲಂಗಳು ಹಾಗೂ ಸಂಘದ ನಿಯಮಾವಳಿಗೆ ವಿರುದ್ಧವಾಗಿ ನಡೆಸಿದ ಅವ್ಯವಹಾರಗಳ ಕುರಿತಂತೆ ಹಾಲಿ ಆಡಳಿತ ಮಂಡಳಿಯು ಲೆಕ್ಕ ಪರಿಶೋಧಕರಿಂದ ಮರು ಲೆಕ್ಕ ಪರಿಶೋಧನೆ ನಡೆಸುತ್ತಿದೆ. ಈ ಲೆಕ್ಕ ಪರಿಶೋಧಕರು ನೀಡಿದ ಮಧ್ಯಂತರ ವರದಿ ಆಧರಿಸಿ ಸಂಘದ ಅವ್ಯಹಾರಗಳಲ್ಲಿ ಭಾಗಿಯಾದವರ ಮೇಲೆ ಆರು ಕ್ರಿಮಿನಲ್ ಪ್ರಕರಣಗಳನ್ನು ಸಂಘದಿಂದ ದಾಖಲಿಸಲಾಗಿತ್ತು. ಈ ಪ್ರಕರಣಗಳ ಕುರಿತು ತನಿಖೆಗಳು ಇನ್ನೂ ಆರಂಭವಾಗಿಲ್ಲ. ಹೀಗಾಗಿ ಈಗಾಗಲೇ ದಾಖಲಿಸಿದ 6 ಕ್ರಿಮಿನಲ್ ಪ್ರಕರಣಗಳ ಕುರಿತು ಶೀಘ್ರವಾಗಿ ತನಿಖೆ ಪ್ರಾರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದರು. 

ಸಂಘದ ಉಪಾಧ್ಯಕ್ಷ ಎಂ.ಎನ್.ಭಟ್ ತೋಟಿಮನೆ, ನಿರ್ದೇಶಕರುಗಳು, ಶಾಖಾ ಸಲಹಾ ಸಮಿತಿ ಸದಸ್ಯರು, ಪರಿಸರ ಬರಹಗಾರ ಶಿವಾನಂದ ಕಳವೆ, ಸಂಘದ ರೈತ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT