ಶಿರಸಿ: ನಗರದ ಚರ್ಚ್ ರಸ್ತೆಯಲ್ಲಿರುವ ಆವೇ ಮರಿಯ ಶಾಲೆಯ ಎದುರು ಅವೈಜ್ಞಾನಿಕವಾಗಿ ಡಿವೈಡರ್ ಅಳವಡಿಸಿರುವುದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ನಿತ್ಯವೂ ಅಪಘಾತದ ಭೀತಿಯಲ್ಲಿ ಸಂಚರಿಸುವಂತಾಗಿದ್ದು, ಇದನ್ನು ತಕ್ಷಣವೇ ಸರಿಪಡಿಸಬೇಕು ಎಂದು ಬಿಜೆಪಿ ಶಿರಸಿ ನಗರ ಮಂಡಲ ಆಗ್ರಹಿಸಿದೆ.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಆನಂದ ಸಾಲೇರ ನೇತೃತ್ವದ ಪಕ್ಷದ ಪ್ರಮುಖರ ನಿಯೋಗವು ಮಂಗಳವಾರ ಲೋಕೋಪಯೋಗಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

‘ಚರ್ಚ್ ರಸ್ತೆಯಲ್ಲಿ ಅಳವಡಿಸಲಾಗಿರುವ ಡಿವೈಡರ್ನಿಂದಾಗಿ ಒಂದು ಕಡೆಯ ಏಕಪಥ ರಸ್ತೆಯು ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. ಇದೇ ರಸ್ತೆಯಲ್ಲಿ ಆವೇ ಮರಿಯಾ ಶಾಲೆಯಿರುವುದರಿಂದ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಶಾಲಾ ಮಕ್ಕಳ ಪ್ರಾಣಕ್ಕೂ ಕುತ್ತು ಬರುವ ಸಂಭವವಿದೆ’ ಎಂದು ನಿಯೋಗ ಕಳವಳ ವ್ಯಕ್ತಪಡಿಸಿತು.

ಇದರೊಂದಿಗೆ ನಗರದ ಪ್ರಮುಖ ಜಂಕ್ಷನ್ ಆಗಿರುವ ಜೂ ಸರ್ಕಲ್ ವೃತ್ತವೂ ಸಹ ಅತ್ಯಂತ ಅಪಾಯಕಾರಿಯಾಗಿ ಮಾರ್ಪಟ್ಟಿದ್ದು, ನಿರಂತರವಾಗಿ ಅಪಘಾತ ವಲಯವಾಗಿ ಮಾರ್ಪಾಡಾಗುತ್ತಿದೆ. ಈ ಎರಡೂ ಗಂಭೀರ ಸಮಸ್ಯೆಗಳನ್ನು ವಾಹನ ಸವಾರರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಲೋಕೋಪಯೋಗಿ ಇಲಾಖೆಯು ಆದ್ಯತೆಯ ಮೇರೆಗೆ ಪರಿಶೀಲಿಸಿ, ತಾಂತ್ರಿಕ ದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಲಾಯಿತು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ, ಪಕ್ಷದ ಪ್ರಮುಖರಾದ ನಂದನ ಸಾಗರ, ಶ್ರೀಕಾಂತ ನಾಯ್ಕ, ರಿತೇಶ್ ಕೆ., ರಮಾಕಾಂತ ಭಟ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-20-2057094040

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.